ಪುಣೆ: ಮಹಾರಾಷ್ಟ್ರದ ಗೊಂಡಿಯಾದಲ್ಲಿ ರಾಜ್ಯ ಸಾರಿಗೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವತ್ತು ಜನರು ಗಾಯಗೊಂಡಿದ್ದಾರೆ ಎಂದು ಗೊಂಡಿಯಾ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಮಹಾರಾಷ್ಟ್ರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ರಸ್ತೆ ಸಾರಿಗೆ ಬಸ್ ಒಂದು ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಪರಿಣಾಮ 7 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
#WATCH | Gondia, Maharashtra | A State transport bus met with an accident after it lost control and overturned near Bindravana Tola village in the Gondia district. So far, 7 people have died. Around 30 people are injured and the injured have been shifted to Gondia District… pic.twitter.com/WZ8mrrv70D
— ANI (@ANI) November 29, 2024
ಬಸ್ ಪಲ್ಟಿಯಾದಂತ ವಿಷಯ ತಿಳಿದಂತ ಸ್ಥಳೀಯರು, ಗಾಯಾಳುಗಳನ್ನು ರಕ್ಷಿಸಿ, ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಒಟ್ಟಾರೆಯಾಗಿ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಬಿಂದ್ರವನ ತೋಲಾ ಗ್ರಾಮದ ಬಳಿ ರಾಜ್ಯ ಸಾರಿಗೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈವರೆಗೆ 7 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 30 ಜನರು ಗಾಯಗೊಂಡಿದ್ದಾರೆ ಮತ್ತು ಗಾಯಗೊಂಡವರನ್ನು ಗೊಂಡಿಯಾ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಗೊಂಡಿಯಾ ಪೊಲೀಸರು ತಿಳಿಸಿದ್ದಾರೆ.
ರಾಜ್ಯದ ‘ಇಂಧನ ಇಲಾಖೆ’ಯಿಂದ ಹೊಸ ವರ್ಷಕ್ಕೆ ‘ಸಚಿವಾಲಯ ನೌಕರ’ರಿಗೆ ಗುಡ್ ನ್ಯೂಸ್
BIG NEWS : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ತನಿಖೆಯಲ್ಲಿ ಸ್ಪೋಟಕ ಅಂಶ ಬಹಿರಂಗ!