ಬೆಂಗಳೂರು: ಮಹಾರಾಷ್ಟ್ರ ರಾಜ್ಯದ ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ದಿನಾಂಕ:26.04.2024ರ ಶುಕ್ರವಾರದಂದು ಮತದಾನ ನಡೆಯಲಿದೆ.
ಮಹಾರಾಷ್ಟ್ರ ರಾಜ್ಯವು ಕರ್ನಾಟಕ ರಾಜ್ಯದ ನೆರೆ ರಾಜ್ಯವಾಗಿರುವುದರಿಂದ ಮಹಾರಾಷ್ಟ್ರ, ರಾಜ್ಯದಲ್ಲಿ ಮತದಾರರಾಗಿರುವವರು ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಧ್ಯತೆ ಇರುವುದರಿಂದ ಅಂತಹ ಮತದಾರರಿಗೆ ಮತದಾನದ ದಿನಾಂಕದಂದು ಬೀದರ್ ಜಿಲ್ಲೆಯಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ಇನ್ನಿತರೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಾರಾಷ್ಟ್ರ ರಾಜ್ಯದ ಮತದಾರರಿಗೆ ಮಾತ್ರ ಸೀಮಿತವಾಗಿ ಮತದಾನ ಮಾಡಲು ಅನುಕೂಲವಾಗುವಂತೆ Representation of People’s Act, 1951ರ ಸೆಕ್ಷನ್-135ಬಿ ಅಡಿಯಲ್ಲಿ ವೇತನ ಸಹಿತ ರಜೆಯನ್ನು ಘೋಷಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.