ಥಾಣೆ: ಮಹಾರಾಷ್ಟ್ರದ ಥಾಣೆ ನಗರದಲ್ಲಿ ಉದ್ಯಮಿಯೊಬ್ಬರು ತಮ್ಮ ಮೊಬೈಲ್ ಫೋನ್ ಹ್ಯಾಕ್ ಆದ ನಂತರ 99.50 ಲಕ್ಷ ರೂ. ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಅಪರಿಚಿತರು ಉದ್ಯಮಿಯ ಫೋನ್ ಹ್ಯಾಕ್ ಮಾಡಿದ್ದು, ಉದ್ಯಮಿಯ ಬ್ಯಾಂಕ್ ಖಾತೆಗಳಿಂದ ಹಣವನ್ನು ನೆಟ್ ಬ್ಯಾಂಕಿಂಗ್ ಮೂಲಕ ಇತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ವಾಗ್ಲೆ ಎಸ್ಟೇಟ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಹಿಡಿಯಲು ಪ್ರಯತ್ನ ನಡೆಸಲಾಗಿದೆ ಎಂದು ಅವರು ಹೇಳಿದರು.
WATCH VIDEO: ತುಂಬಾ ಸುಲಭವಾಗಿ ಭೌತಶಾಸ್ತ್ರದ ಪರಿಕಲ್ಪನೆ ವಿವರಿಸಿದ ಶಿಕ್ಷಕ
ಪ್ರತಿ ದಿನ ಒಂದು ತಾಸು ಹೆಚ್ಚಿಗೆ ಕೆಲಸ ಮಾಡಿ: ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಕರೆ