ನವದೆಹಲಿ: ಒಂದೆಡೆ ಮಹಾರಾಷ್ಟ್ರ ರಾಜ್ಯ ರಾಜಕೀಯ ತೀವ್ರಗೊಂಡು, ಬಿರುಕು ಮೂಡೋ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಮಹಾ ಸರ್ಕಾರ ಪಥನದ ಹಂತಕ್ಕೆ ಬಂದು ನಿಂತಿದೆ. ಈ ವೇಳೆಯಲ್ಲಿಯೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ( Maharashtra Chief Minister Uddhav Thackeray ) ಕೋವಿಡ್ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ.
ಇಡಿಯಿಂದ ವಿಚಾರಣೆ ನೆಪದಲ್ಲಿ ರಾಹುಲ್ ಗಾಂಧಿಗೆ ಕಿರುಕುಳ – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ
ಈ ಕುರಿತಂತೆ ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷದ ವೀಕ್ಷಕ ಕಮಲ್ ನಾಥ್ ( Congress’ Maharashtra observer Kamal Nath ) ಮಾಹಿತಿ ನೀಡಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
#WATCH | Mumbai: "Maharashtra CM Uddhav Thackeray has tested positive for #COVID19," says Congress Observer for the state, Kamal Nath. pic.twitter.com/wl22yJkXXt
— ANI (@ANI) June 22, 2022
ಮಹಾ ಸಿಎಂ ಉದ್ಧವ್ ಠಾಕ್ರೆ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಕ್ಯಾಬಿನೆಟ್ ಸಭೆ ನಡೆಸಬೇಕಿತ್ತು. ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟಿನ ನಡುವೆ ಸಂಜೆ 5 ಗಂಟೆಗೆ ಶಾಸಕರೊಂದಿಗೆ ಸಂವಾದ ನಡೆಸಬೇಕಿತ್ತು. ಅವರು ಇಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಲಿದ್ದರು. ಈ ವೇಳೆಯಲ್ಲಿಯೇ ಅವರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
BIG NEWS: ಯಾರ್ ಇವರಿಗೆ ‘ಅಗ್ನಿಪಥ್ ಯೋಜನೆ’ ಜಾರಿಗೆ ತರಲು ಹೇಳಿದ್ದು.? – ಮಾಜಿ ಸಿಎಂ ಕುಮಾರಸ್ವಾಮಿ