ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ( Maharashtra Governor CP Radhakrishnan ) ಅವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (National Democratic Alliance – NDA) ಭಾನುವಾರ ತನ್ನ ಅಭ್ಯರ್ಥಿ ಎಂದು ಘೋಷಿಸಿದೆ.
ಜಗದೀಪ್ ಧಂಖರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುಮಾರು ಒಂದು ತಿಂಗಳ ನಂತರ, ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಸಿಪಿ ರಾಧಾಕೃಷ್ಣನ್ ಅವರನ್ನು ಅಧಿಕೃತವಾಗಿ ಘೋಷಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪತ್ರಿಕಾಗೋಷ್ಠಿಯಲ್ಲಿ ರಾಧಾಕೃಷ್ಣನ್ ಅವರ ಅಭ್ಯರ್ಥಿಯನ್ನು ಘೋಷಿಸಿದರು.
#WATCH | Delhi: Maharashtra Governor CP Radhakrishnan will be the NDA's candidate for the Vice Presidential election, says BJP national president and Union Minister JP Nadda pic.twitter.com/VzSJVjoF6p
— ANI (@ANI) August 17, 2025