ಮಹಾರಾಷ್ಟ್ರ: ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಮ್ ಮಹಾರಾಜ್ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಸರ್ಕಾರ ಅನುಮೋದನೆ ನೀಡಿದೆ.
ಪುಣೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಜಗದ್ಗುರು ಸಂತ ತುಕಾರಾಮ್ ಮಹಾರಾಜ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವ ಪ್ರಸ್ತಾಪಕ್ಕೆ ಮಹಾರಾಷ್ಟ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ.
ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಈ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಮೊಹೋಲ್ ಅವರು, ಪುಣೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ‘ಜಗದ್ಗುರು ಶ್ರೇಷ್ಠ ತುಕಾರಾಮ್ ಮಹಾರಾಜ್ ಪುಣೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ ಮಾಡುವ ಮೊದಲ ಹೆಜ್ಜೆಯನ್ನು ಇಂದು ತೆಗೆದುಕೊಳ್ಳಲಾಗಿದೆ ಮತ್ತು ನಾವು ನೀಡಿದ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಅನುಮೋದಿಸಿದೆ ಎಂದು ತಿಳಿಸಿದ್ದಾರೆ.
धन्यवाद, महायुती सरकार !
धन्यवाद, मा. देवेंद्रजी !पुण्यातील आंतरराष्ट्रीय विमानतळाचे नामकरण ‘जगद़्गुरु संतश्रेष्ठ तुकाराम महाराज पुणे आंतरराष्ट्रीय विमानतळ’ असे करण्याच्या दृष्टीने पहिले पाऊल आज पडले असून आपण दिलेल्या प्रस्तावाला राज्य सरकारने मंजुरी दिली आहे. सदर प्रस्ताव हा… pic.twitter.com/vbtenDNYiD
— Murlidhar Mohol (@mohol_murlidhar) September 23, 2024