ಮಹಾರಾಷ್ಟ್ರ: ರಾಜ್ಯದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಮಹಾರಾಷ್ಟ್ರದಲ್ಲೂ ಸಹ ಮಳೆಯ ಅಬ್ಬರ ಮುಂದುವರೆದಿದ್ದು, ಇಂದಿನಿಂದ 5 ಜಿಲ್ಲೆಗಳಿಗೆ “ಆರೆಂಜ್ ಅಲರ್ಟ್” ಘೋಷಿಸಿದೆ. ಪಾಲ್ಘರ್, ರಾಯಗಡ, ಪುಣೆ, ಕೊಲ್ಹಾಪುರ ಮತ್ತು ಸತಾರಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಹಾರಾಷ್ಟ್ರದ ಹಲವಾರು ಭಾಗಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ತಂಡಗಳು ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನ ರಾಜ್ಯದಲ್ಲಿ ನಿಯೋಜಿಸಲಾಗಿದೆ. ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿಗಳು ಎದುರಾಗಿದ್ದು,
ಭೂಕುಸಿತಗಳು ಆಗಿದೆ ಎಂದು ವರದಿಯಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, “ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿವೆ. ನಾನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಎಲ್ಲಾ ಅಧಿಕಾರಿಗಳು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಎಲ್ಲಾ ಡಿಎಂಗಳು ಕ್ಷೇತ್ರದಲ್ಲಿದ್ದಾರೆ. ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದರು.
Maharashtra | Efforts are underway to evacuate the people of the flood-affected areas to a safer place. I'm monitoring closely. All the officers are in touch with me. All DMs are in the field. Our govt is committed to ensure the safety of people: Maha CM Eknath Shinde in Mumbai pic.twitter.com/NwV51FXm3m
— ANI (@ANI) July 15, 2022