ಬೆಳಗಾವಿ: ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ, ಶಾಂತಿ ಕದಡಲು ಆಗಮಿಸುತ್ತಿರುವ ಮಹಾರಾಷ್ಟ್ರದ ಇಬ್ಬರು ಸಚಿವರು ಬೆಳಗಾವಿ ಪ್ರವೇಶಿಸದಂತೆ ಕಡಿವಾಣ ಹಾಕಬೇಕು. ಇಲ್ಲವಾದ್ರೆ ಕರವೇ ಕಾರ್ಯಕರ್ತರು ಮಹಾರಾಷ್ಟ್ರದ ಸಚಿವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.
BIGG NEWS: ಸಿನಿಮಾದಲ್ಲಿ ನಾನು ನಟಿಸುತ್ತಿಲ್ಲ:ಮಾಜಿ ಸಿಎಂ ಸಿದ್ದರಾಮಯ್ಯ
ಈ ಕುರಿತಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಮಹಾರಾಷ್ಟ್ರ ಸರ್ಕಾರ ಭಾರತದ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ. ಪ್ರಧಾನಿ ಬಳಿ ನಿಯೋಗ ಕೊಂಡೊಯ್ದು ಕೇಂದ್ರ ಸರ್ಕಾರ ಮಹಾರಾಷ್ಟ್ರ ಸರ್ಕಾರಕ್ಕೆ ಲಗಾಮು ಹಾಕುವಂತೆ ಒತ್ತಾಯಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
BIGG NEWS: ಸಿನಿಮಾದಲ್ಲಿ ನಾನು ನಟಿಸುತ್ತಿಲ್ಲ:ಮಾಜಿ ಸಿಎಂ ಸಿದ್ದರಾಮಯ್ಯ
ಡಿಸೆಂಬರ್ 3 ರಂದು ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜೆ ಅವರು ಬೆಳಗಾವಿಯಲ್ಲಿ ಸಭೆ ನಡೆಸುವುದಾಗಿ ಟ್ವೀಟ್ ಮಾಡಿದ್ದಾರೆ. ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಗಣಿಸದಿದ್ದರೆ ಮಹಾರಾಷ್ಟ್ರದ ಆ ಇಬ್ಬರು ಸಚಿವರು ಬೆಳಗಾವಿಯಲ್ಲಿ ನಡೆಸಲಿರುವ ಸಭೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮುತ್ತಿಗೆ ಹಾಕಿ ತಡೆಯಬೇಕಾಗುತ್ತದೆ ಎಂದು ತಿಳಿಸಿದ್ದಾರೆ.