ನಾಗ್ಪುರ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಪ್ರಚೋದನೆ ನೀಡುತ್ತಿದ್ದಾರೆ ಎಂದು ಮಹಾರಾಷ್ಟ್ರ ವಿಪಕ್ಷ ನಾಯಕ ಅಜಿತ್ ಪವಾರ್ ಆರೋಪಿಸಿದ್ದಾರೆ.
ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರದ ಚರ್ಚೆ ವೇಳೆ ಮಾತನಾಡಿದ ವಿಪಕ್ಷ ನಾಯಕ ಅಜಿತ್ ಪವಾರ್, ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರು ಉದ್ದೇಶಪೂರ್ವಕವಾಗಿ ಗಡಿ ವಿಚಾರದಲ್ಲಿ ಪ್ರಚೋದನೆ ನೀಡುತ್ತಿದ್ದಾರೆ ಎಂದರು.
ಕರ್ನಾಟಕದ ಸಿಎಂ ನಮಗೆ ದ್ರೋಹ ಮಾಡಿದ್ರೂ ಸುಮ್ಮನಿದ್ದೇವೆ. ಗಡಿ ವಿವಾದದ ಬಗ್ಗೆ ಸರ್ಕಾರ ನಿರ್ಣಯ ಕೈಗೊಒಳ್ಳಬೇಕು. ಎಂಇಎಸ್ ನವರು ಕೊಲ್ಹಾಪುರಕ್ಕೆ ಬರುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಸದನದಲ್ಲಿ ಹೇಳಿಕೆ ನೀಡಿದ್ದಾರೆ.
BREAKING NEWS : ಜನಜೀವನ, ವ್ಯಾಪಾರ ವಹಿವಾಟಿಗೆ ತೊಂದರೆ ಆಗದಂತೆ ಮುಂಜಾಗ್ರತ ಕ್ರಮ : ಸಿಎಂ ಬೊಮ್ಮಾಯಿ ಹೇಳಿಕೆ