ಬೆಳಗಾವಿ: ಬೆಳಗಾವಿ ಸೇರಿದಂತೆ ಹಲವು ಕರ್ನಾಟಕದ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಂಡೆ ಸಿದ್ಧ ಎಂಬ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಾಯಕರ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ಕರವೇ ಅಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
BIGG NEWS: ಮಂಡ್ಯದಲ್ಲಿ ಕಬಡ್ಡಿ ಮೈದಾನಕ್ಕಿಳಿದ ಶಾಸಕ ಪುಟ್ಟರಾಜು; ಆಟ ಕಂಡು ಯುವಕರ ಶಿಳ್ಳೆಯ ಸುರಿಮಳೆ
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ತಡೆಯಲು ಪೊಲೀಸರು ಸಜ್ಜಾಗಿದ್ದು, ಅಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಗಾವಿಯಲ್ಲಿ ಗಡಿ ಗಲಾಟೆ ಜೋರಾಗಿದೆ. ಈ ವೇಳೆ ಮಹಾ ಸರ್ಕಾರದ ವಿರುದ್ಧ ಕರವೇ ಹೋರಾಟ ಜೋರಾಗಿದೆ. ಮಹಾರಾಷ್ಟ್ರದ ನೋಂದಣಿ ಲಾರಿಗಳಿಗೆ ಮಸಿ ಬಳಿದು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಲಾರಿಗಳ ಗಾಜು ಪುಡಿ..ಪುಡಿ ಮಾಡಿ ಕರವೇ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಕರವೇ ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.