ಚಿಕ್ಕೋಡಿ: ಇಂದು ಮಹಾರಾಷ್ಟ್ರ ಬಳಿಯಲ್ಲಿ ಕ್ರೂಸರ್ ವಾಹನವೊಂದು ಪಲ್ಟಿಯಾದ ಪರಿಣಾಮ, ಅದರಲ್ಲಿದ್ದಂತ ಚಿಕ್ಕೋಡಿಯ ಬಳ್ಳಿಗೇರಿಯ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಅಲ್ಲದೇ ಇನ್ನೂ ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ.
ಮಹಾರಾಷ್ಟ್ರದ ಜತ್ತ ಬಳಿಯಲ್ಲಿ ಕ್ರೂಸರ್ ವಾಹನವೊಂದು ಪಲ್ಟಿಯಾದ ಪರಿಣಾಮ, ಅಥಣಿ ತಾಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ದುರ್ಮರಣ ಹೊಂದಿದ್ದಾರೆ.
ಚಿಕ್ಕೋಡಿಯಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕಾಗಿ ಕ್ರೂಸರ್ ನಲ್ಲಿ ತೆರಳುತ್ತಿದ್ದಾಗ, ಕ್ರೂಸರ್ ವಾಹನದ ಎಡಬದಿಯ ಟೈಯರ್ ಸ್ಪೋಟಗೊಂಡು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಮಹಾದೇವಿ ಚೌಗಲಾ, ಗೀತಾ ದೊಡ್ಡಮನಿ, ಕಸ್ತೂರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನೂ ಇದೇ ವಾಹನದಲ್ಲಿ ಸಂಚರಿಸುತ್ತಿದ್ದಂತ ಇತರರಿಗೆ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಬಳ್ಳಿಗೇರಿಯಲ್ಲಿ ಮೂವರು ಮಹಿಳೆಯರು ಅಪಘಾತದಲ್ಲಿ ದುರ್ಮರಣದಿಂದಾಗಿ ನೀರವ ಮೌನ ಆವರಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
‘SSLC ಪರೀಕ್ಷೆ-2’ಕ್ಕೆ ‘ನೋಂದಣಿ’ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
‘ತಾಯಿಯಾಗುವುದು’ ಸಹಜ ವಿದ್ಯಮಾನ : ಉದ್ಯೋಗಿಗೆ ಹೆರಿಗೆ ಬಾಕಿ ಪಾವತಿಸಲು ಕೋರ್ಟ್ ಆದೇಶ