ಸುಭಾಷಿತ :

Monday, December 9 , 2019 2:34 PM

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಜನಪ್ರಿಯ ಗಾಯಕಿ ಸಾವು


Friday, November 15th, 2019 9:34 am

ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಜನಪ್ರಿಯ ಗಾಯಕಿಯೋಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮರಾಠಿ ಚಿತ್ರರಂಗದ ಖ್ಯಾತ ಹಿನ್ನಲೆ ಗಾಯಕಿ ಗೀತಾ ಮಲಿ ಅಪಘಾತದಲ್ಲಿ ಮೃತಪಟ್ಟದ್ದಾರೆ. ಕಾರು ಕಂಟೈನರ್ ಗೆ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮುಂಬೈ – ಆಗ್ರಾ ಹೆದ್ದಾರಿಯಲ್ಲಿ ತಮ್ಮ ಕಾರಿನಲ್ಲಿ ಪ್ರಯಾಣ ಮಾಡುವ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗೀತಾ ಸಾವನ್ನಪ್ಪಿದರೆ , ಕಾರಿನಲ್ಲಿದ್ದ ಆಕೆಯ ಪತಿ ವಿಜಯ್ ಕೂಡಾ ಗಂಭೀರ ಗಾಯಗೊಂಡಿದ್ಧಾರೆ ಎಂದು ತಿಳಿದು ಬಂದಿದೆ.

ಅಮೇರಿಕಾದಿಂದ ಗುರುವಾರ ತನ್ನ ಪತಿಯೊಂದಿಗೆ ಬಂದಿದ್ದ ಗೀತಾ ನಾಸಿಕ್ ನಲ್ಲಿರುವ ತಮ್ಮ ಮನೆಗೆ ಪ್ರಯಾಣಿಸುತ್ತಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions