ಮಂಡ್ಯ : ರಾಮಾಯಣದಂತ ಮಹಾಕಾವ್ಯ ರಚಿಸುವ ಮೂಲಕ ಭಾರತ ಪ್ರಾಚೀನ ಬದುಕು, ಸಂಸ್ಕೃತಿ ಹಾಗೂ ಸಂಬಂಧಗಳ ಮೌಲ್ಯಗಳನ್ನು ಶ್ರೀ ಮಹರ್ಷಿ ವಾಲ್ಮೀಕಿ ಅವರು ದಾಖಲಿಸಿದ್ದಾರೆಂದು ಮದ್ದೂರು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಅಭಿಪ್ರಾಯಪಟ್ಟರು.
ಮದ್ದೂರು ನಗರದ ನಗರಸಭಾ ಆವರಣದಲ್ಲಿ ಮಂಗಳವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.
ರಾಮಾಯಣದಂತ ಮಹಾಕಾವ್ಯದ ಪಾತ್ರಗಳ ಮೂಲಕ ಜವಾಬ್ದಾರಿ ಮತ್ತು ಕರ್ತವ್ಯದ ಮಹತ್ವ ಸಾರಿ ಮುಂದಿನ ಯುವ ಪೀಳಿಗೆಗೆ ಮೌಲ್ಯಯುತ, ನ್ಯಾಯ, ನಿಷ್ಟೆ, ಪ್ರಾಮಾಣಿಕ ಬದುಕಿನ ಮಾರ್ಗವನ್ನು ತೋರಿದ್ದಾರೆ. ಅವರು ತೋರಿದ ಬೆಳಕಿನ ದಾರಿಯಲ್ಲಿ ನಾವೆಲ್ಲ ಸಾಗಬೇಕಾಗಿದೆ ಎಂದರು.
ನಗರಸಭೆ ಅಧ್ಯಕ್ಷೆ ಕೋಕಿಲಾ ಅರುಣ್ ಮಾತನಾಡಿ, ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನು ಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಕೆಳ ಹಂತದ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದ್ದಾರೆ. ವಾಲ್ಮೀಕಿ ಸೇರಿದಂತೆ ದೇಶದ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ನಾವೆಲ್ಲರು ಮಾನವೀಯ ಮೌಲ್ಯಗಳನ್ನು ಅನುಸರಿಸಬೇಕೆಂದರು.
ಹೆಚ್.ಕೆ.ವೀರಣ್ಣಗೌಡ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಸಂದೀಪ್ ಅವರು ವಾಲ್ಮೀಕಿ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲದ ಆವರಣದಿಂದ ವಿವಿಧ ಜನಪದ ಕಲಾ ಪ್ರಕಾರಗಳೊಂದಿಗೆ ವಾಲ್ಮೀಕಿ ಅವರ ಭಾವಚಿತ್ರವನ್ನು ತೆರೆದ ವಾಹನದಲ್ಲಿಟ್ಟು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ನಗರಸಭಾ ಕಚೇರಿಗೆ ಆಗಮಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸರ್ವಮಂಗಳ, ಸುರೇಶ್, ತಾಪಂ ಇಒ ರಾಮಲಿಂಗಯ್ಯ, ಬಿಇಒ ಧನಂಜಯ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕ ನಾಗರಾಜು, ಪೊಲೀಸ್ ಇನ್ಸ್ಪೆಕ್ಟರ್ ವೆಂಕಟೇಗೌಡ ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
30ಕ್ಕೂ ಹೆಚ್ಚು ವರ್ಷಗಳಿಂದ ಹಕ್ಕುಪತ್ರ, ಮೂಲ ಸೌಕರ್ಯಗಳಿಲ್ಲ: ಮದ್ದೂರು ಶಾಸಕ ಉದಯ್ ಮುಂದೆ ಜನರ ಅಳಲು