ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಇದೀಗ ಹೈಕೋರ್ಟ್ ನ್ಯಾಯಮೂರ್ತಿ ಶಿವರಾಜ್ ಗೋವಿಂದರಾಜ ಅವರಿದ್ದ ಪೀಠ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಮಹೇಶ ತಿಮರೋಡಿ ಗಡಿಪಾರು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಇಂದು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ ಅವರಿದ್ದ ಪೀಠ ಆದೇಶವನ್ನು ಕಾಯ್ದಿರಿಸಿದ್ದು, ಹೈಕೋರ್ಟ್ ಆದೇಶದ ವರೆಗೆ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ. ಮುಂದಿನ ಆದೇಶದ ವರೆಗೆ ಗಡಿಪಾರು ಜಾರಿಗೊಳಿಸಿದಂತೆ ಸೂಚನೆ ನೀಡಿದರು. ಈ ಮೂಲಕ ಮಹೇಶ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.