ಬೆಂಗಳೂರು : ಗಡಿಪಾರು ಆದೇಶ ಪ್ರಶ್ನೆಸಿ ಮಹೇಶ ಶೆಟ್ಟಿ ಕೆಮ್ಮರೋಡಿ ಅರ್ಜಿ ಸಲ್ಲಿಸಿದ್ದು ಮಾರ್ಚ್ 26 ರ ವರೆಗೆ ಗಡಿಪಾರು ಆದೇಶ ಅನುಷ್ಠಾನಗೊಳಿಸದಂತೆ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಹೈಕೋರ್ಟ್ ಪೀಠ ಅವರಿಂದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.
ಸೆಪ್ಟೆಂಬರ್ 16ರವರೆಗೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಮಾಡಲಾಗಿತ್ತು. ಪುತ್ತೂರು, ದಕ್ಷಿಣ ಕನ್ನಡ ಜಿಲ್ಲಾ ಉಪವಿಭಾಗಾಧಿಕಾರಿ ಆದೇಶ ಮಾಡಿದ್ದರು. ಈ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.








