ಉಡುಪಿ : ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲಾಗಿತ್ತು. ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹಿರಿಯಡ್ಕ ಸಬ್ ಜೈಲಿನಲ್ಲಿರುವ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಕೋರ್ಟ್ ಆದೇಶದ ಹಿನ್ನೆಲೆ ಮಹೇಶ್ ತಿಮರೋಡಿ ಈಗ ಹಿರಿಯಡ್ಕ ಸಬ್ ಜೈಲು ನಲ್ಲಿದ್ದಾರೆ. ಇಂದು ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಲಿದೆ ಅಂತ ತಿಳಿದು ಬಂದಿದೆ.
ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ, ಉಡುಪಿಯ ಬ್ರಹ್ಮಾವರ ತಾಲ್ಲೂಕಿನ ಸಂಚಾರಿ ನ್ಯಾಯಪೀಠದ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ.