ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಆಡಳಿತಗಾರರಾಗಿ ತುಷಾರ್ ಗಿರಿ ನಾಥ್ ಅವರು ಹಾಗೂ ಮುಖ್ಯ ಆಯುಕ್ತರಾಗಿ ಮಹೇಶ್ವರ್ ರಾವ್ ಅವರು ಸರ್ಕಾರದಿಂದ ನೇಮಕಗೊಂಡಿದ್ದು, ಇಂದು ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರದಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದಂತ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಅವರ ಸ್ಥಾನಕ್ಕೆ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿತ್ತು.
ಈ ಹಿನ್ನಲೆಯಲ್ಲಿ ಇಂದು ಬಿಬಿಎಂಪಿಯ ಮುಖ್ಯ ಆಯುಕ್ತರ ಕಚೇರಿಯಲ್ಲಿ, ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ್ ರಾವ್ ಅವರು ಅಧಿಕಾರ ಸ್ವೀಕರಿಸಿದರು. ಅಲ್ಲದೇ ಬಿಬಿಎಂಪಿಯ ನೂತನ ಆಡಳಿತಗಾರರಾಗಿ ತುಷಾರ್ ಗಿರಿನಾಥ್ ಅವರು ಕೂಡ ಅಧಿಕಾರ ಸ್ವೀಕರಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ಕರೀಗೌಡ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
BIG NEWS: ಕರ್ತವ್ಯದ ಅವಧಿಯಲ್ಲೇ ‘ಸರ್ಕಾರಿ ಬಸ್’ ನಿಲ್ಲಿಸಿ ‘ನಮಾಜ್’ ಮಾಡಿದ ಚಾಲಕ
BIG NEWS : ದೇಶದಲ್ಲಿ ನಾಳೆಯಿಂದ 15 ಬ್ಯಾಂಕುಗಳ ವಿಲೀನ : ಖಾತೆದಾರರ ಮೇಲೆ ಏನು ಪರಿಣಾಮ ಬೀರುತ್ತದೆ?