ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯ ನಂತ್ರ ಮುಖ್ಯ ಪರೀಕ್ಷೆಗೆ ಕೆಪಿಎಸ್ಸಿಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್-ಎ ಹಾಗೂ ಗ್ರೂಪ್-ಬಿ ವೃಂದದ 384 ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗಿತ್ತು ಎಂದಿದೆ.
ಕೆಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಬಳಿಕ ಮುಖ್ಯಪರೀಕ್ಷೆಯನ್ನು ಮೇ.3, 5, 7 ಮತ್ತು 9ರಂದು ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದೆ. ಇನ್ನೂ ಅರ್ಹತಾ ಪರೀಕ್ಷೆ ಕನ್ನಡ ಮೇ.3ರಂದು ಬೆಳಿಗ್ಗೆ 10ರಿಂದ 12 ಗಂಟೆಯವರೆಗೆ ನಡೆಸಲಾಗುತ್ತದೆ. ಇಂಗ್ಲೀಷ್ ಪರೀಕ್ಷೆಯನ್ನು ಮೇ.3ರ ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ನಡೆಸಲಾಗುತ್ತಿದೆ ಎಂದಿದೆ.
ಮೇ.5ರಂದು ಪತ್ರಿಕೆ-1ರ ಪ್ರಬಂಧ ವಿಷಯಕ್ಕೆ ಸಂಬಂಧಿಸಿದಂತ ಪರೀಕ್ಷೆಯು ಬೆಳಿಗ್ಗೆ 10ರಿಂದ 1 ಗಂಟೆಯವರೆಗೆ ನಡೆಯಲಿದೆ. ಪತ್ರಿಕೆ-2ರ ಸಾಮಾನ್ಯ ಅಧ್ಯಯನ-1ರ ಪರೀಕ್ಷೆಯೂ ಮೇ.7ರಂದು ಬೆಳಿಗ್ಗೆ 9ರಿಂದ 12ರವರೆಗೆ ನಡೆಯಲಿದೆ. ಪತ್ರಿಕೆ-3ರ ಸಾಮಾನ್ಯ ಅಧ್ಯಯನ-2 ಪರೀಕ್ಷೆಯು ಮೇ.7ರಂದು ಮಧ್ಯಾಹ್ನ 2ರಿಂದ 5ರವರೆಗೆ ನಡೆಯಲಿದೆ ಎಂದು ತಿಳಿಸಿದೆ.
ಮೇ.9ರಂದು ಪತ್ರಿಕೆ-4ರ ಸಾಮಾನ್ಯ ಅಧ್ಯಯನ-3 ಪರೀಕ್ಷೆಯು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ನಡೆಯಲಿದೆ. ಪತ್ರಿಕೆ-5ರ ಸಾಮಾನ್ಯ ಅಧ್ಯಯನ-4ರ ಪರೀಕ್ಷೆಯೂ ಮಧ್ಯಾಹ್ನ 2ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ ಎಂಬುದಾಗಿ ಕರ್ನಾಟಕ ಲೋಕಸೇವಾ ಆಯೋಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!