ಬೆಂಗಳೂರು: ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದಂತ 384 ಕೆಎಎಸ್ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಯನ್ನು ಏಪ್ರಿಲ್ 2ರಂದು ನಡೆಸುವುದಾಗಿ ಕೆಪಿಎಸ್ಸಿ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಲೋಕಸೇವಾ ಆಯೋಗವು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಿಗೆ ಅಧಿಸೂಚನೆಗಳನ್ನು ಕ್ರಮವಾಗಿ ದಿನಾಂಕ: 26-02-2024 ಮತ್ತು. ದಿನಾಂಕ:13-02-2025ರಂದು ಹೊರಡಿಸಲಾಗಿರುತ್ತದೆ ಎಂದು ತಿಳಿಸಿದೆ.
ದಿನಾಂಕ:13-02-2025ರ ಅಧಿಸೂಚನೆಯಲ್ಲಿ ಮುಖ್ಯ ಪರೀಕ್ಷೆಯನ್ನು ದಿನಾಂಕ:28-03-2025, 29-03-2025, 01-04-2025 ಮತ್ತು 02-04-2025ರಂದು ನಡೆಸಲು ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ ಮುಖ್ಯ ಪರೀಕ್ಷೆಯನ್ನು ಮುಂದೂಡಿ, ಪ್ರಕಟಣೆ ಹೊರಡಿಸಲಾಗಿತ್ತು ಎಂದು ಹೇಳಿದೆ.
ಪ್ರಸ್ತುತ ಸದರಿ ಮುಖ್ಯ ಪರೀಕ್ಷೆಯನ್ನು ದಿನಾಂಕ:03-05-2025, 05-05-2025, 07-05-2025 ಮತ್ತು 09-05-2025 ರಂದು ನಡೆಸಲು ಮರುನಿಗದಿಪಡಿಸಲಾಗಿರುತ್ತದೆ. ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.in ನಲ್ಲಿ, ಅಭ್ಯರ್ಥಿಗಳ ಮಾಹಿತಿಗಾಗಿ ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ.
BREAKING : ಕೇರಳದ ಸೀತಾದೇವಿ ಲವ್ ಕುಶ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ | WATCH VIDEO