ಬೆಂಗಳೂರು: ನಿನ್ನೆಯಷ್ಟೇ 108 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ( Police Inspector Transfer ) ರಾಜ್ಯ ಸರ್ಕಾರ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿತ್ತು. ಇಂದು ಮತ್ತೆ 30 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ( Karnataka Police Inspector ) ಮಾಡಿದೆ. ಅಲ್ಲದೇ ಇಬ್ಬರು ನಾನ್ ಐಪಿಎಸ್ ಅಧಿಕಾರಿಗಳನ್ನು ( Non IPS Officer ) ವರ್ಗಾವಣೆ ಮಾಡಿ ಆದೇಶಿಸಿದೆ.
‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ಜೇನು ಕೃಷಿ ತರಬೇತಿ’ಗೆ ಅರ್ಜಿ ಆಹ್ವಾನ
ಈ ಸಂಬಂಧ ಪೊಲೀಸ್ ಇಲಾಖೆಯಿಂದ ವರ್ಗಾವಣೆ ಆದೇಶ ಹೊರಡಿಸಲಾಗಿದ್ದು, ಸಿಇಎಸ್ ಪೊಲೀಸ್ ಠಾಣೆ, ಬಿಎಂಟಿಎಫ್ ಸೇರಿದಂತೆ ವಿವಿಧ ಠಾಣೆಗಳ 30 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.
ಶಿವಮೊಗ್ಗ: ಡಿ.7ರವರೆಗೆ ಕುವೆಂಪು ವಿವಿ ಸ್ನಾತಕೋತ್ತರ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಇದಷ್ಟೇ ಅಲ್ಲದೆ ನಾನ್ ಐಪಿಎಸ್ ಇಬ್ಬರು ಸಿವಿಲ್ ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿದೆ. ಸ್ಥಳ ನಿರೀಕ್ಷೆಯಲ್ಲಿದ್ದಂತ ನಾನ್ ಐಪಿಎಸ್ ಅಧಿಕಾರಿ ಎಸ್ ರಮೇಶ್ ಕುಮಾರ್ ಅವರನ್ನು ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷರನ್ನಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಸಿ.ಟಿ ಜಯಕುಮಾರ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆಗೊಳಿಸಿದೆ.
ಹೀಗಿದೆ 30 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಪಟ್ಟಿ
ಹೀಗಿದೆ ಇಬ್ಬರು ನಾನ್ ಐಪಿಎಸ್ ಪೊಲೀಸ್ ಅಧೀಕ್ಷಕರ ವರ್ಗಾವಣೆ ಪಟ್ಟಿ