ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 49 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಹಾಗೂ ದಿನಾಂಕ 27-02-2024ರ ಭಾರತೀಯ ಚುನಾವಣಾ ಆಯೋಗದ ಉಲ್ಲೇಖಿತ ಮಾರ್ಗಸೂಚಿಯನ್ವಯ 49 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿರೋದಾಗಿ ತಿಳಿಸಿದೆ.
ಬೆಂಗಳೂರಿನ ತಲಘಟ್ಟಪುರ ಠಾಣೆ ಇನ್ಸ್ ಪೆಕ್ಟರ್ ಜಗದೀಶ್ ಎನ್ ಅವರನ್ನು ಬೆಂಗಳೂರು ನಗರ ನಿಯಂತ್ರಣ ಕೊಠಡಿಗೆ ವರ್ಗಾವಣೆ ಮಾಡಿದ್ದರೇ, ಸಿಸಿಬಿಯ ಸುರೇಶ್ ಪಿ ಅವರನ್ನು ತಲಘಟ್ಟಪುರಕ್ಕೆ ಪಿಎಸ್ಐ ಆಗಿ ವರ್ಗಾವಣೆ ಮಾಡಲಾಗಿದೆ.
ಕಾಟನ್ ಪೇಟೆ ಠಾಣೆ ಪಿಎಸ್ಐ ಯರೀಸ್ವಾಮಿ.ಈ ಅವರನ್ನು ರಾಜ್ಯಗುಪ್ತವಾರ್ತೆಗೆ, ಸಿಸಿಬಿಯ ಸುಧಾಕರ್.ಬಿಎಸ್ ಅವರನ್ನು ಕಾಟನ್ ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ಆಗಿ ನೇಮಿಸಲಾಗಿದೆ. ಕೆಜಿ ಹಳ್ಳಿ ಠಾಣೆ ಪಿಎಸ್ಐ ಶಿವಸ್ವಾಮಿ ಸಿಬಿ ಅವರನ್ನು ಬೆಂಗಳೂರಿನ ಆಗ್ನೇಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಆಗಿ ವರ್ಗಾವಣೆ ಮಾಡಲಾಗಿದೆ.
ಹೀಗಿದೆ 49 ಪಿಎಸ್ಐ ವರ್ಗಾವಣೆಯ ಪಟ್ಟಿ
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಪ್ರಥಮ ಅಧಿವೇಶನ ‘ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ