ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಂಬಂಧ, ಮೂವರು ಐಎಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಪಿ., ಐಎಎಸ್ (ಕೆಎನ್: 1998) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ಮುಂದಿನ ಆದೇಶದವರೆಗೆ ಐಎಎಸ್ ಅಧಿಕಾರಿ ಡಾ.ಅಜಯ್ ನಾಗಭೂಷಣ್ ಎಂ.ಎನ್ ಅವರನ್ನು ಕೇಂದ್ರ ಸರ್ಕಾರಿ ಸೇವೆಗೆ ಡೆಪ್ಯುಟೇಶನ್ ಮೇಲೆ ಬಿಡುಗಡೆ ಮಾಡಲಾಗಿದೆ.
ಇನ್ನೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಐಎಎಸ್ (ಕೆಎನ್: 2004) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಿ ಆದೇಶಿಸಿದೆ.
ಮನೋಜ್ ಜೈನ್, ಐಎಎಸ್ (ಕೆಎನ್: 2006), ಸರ್ಕಾರದ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ, ಬೆಂಗಳೂರು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹುದ್ದೆಯಲ್ಲಿದ್ದಂತ ಕುಮಾರ್ ಟಿ.ಎಚ್.ಎಂ., ಐಎಎಸ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.
ಮನೋಜ್ ಜೈನ್, ಐಎಎಸ್ (ಕೆಎನ್: 2006) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಿ ಆದೇಶಿಸಿದೆ.
ಸಲ್ಮಾ ಕೆ ಫಾಹಿಮ್, ಐಎಎಸ್ (ಕೆಎನ್: 2006), ಸರ್ಕಾರದ ಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಅವರನ್ನು ಬೆಂಗಳೂರಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ಈ ಹುದ್ದೆಯಲ್ಲಿದ್ದಂತ ಮನೋಜ್ ಜೈನ್, ಐಎಎಸ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.
ರಾಜ್ಯದ ‘SC, ST ಸಮುದಾಯ’ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ KAS Mains ತರಬೇತಿ’ಗೆ ಅರ್ಜಿ ಆಹ್ವಾನ
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲಿ ಸ್ಥಳ ಘೋಷಣೆ: ಡಿಸಿಎಂ ಡಿಕೆಶಿ