ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸಿದೆ.
ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದಂತ ಮಂಜುನಾಥಸ್ವಾಮಿ ಜಿಎನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಅಪರ ಜಿಲ್ಲಾ ದಂಡಾಧಿಕಾರಿಯಾಗಿದ್ದಂತ ಪ್ರಕಾಶ್ ಗೋಪು ರಜಪೂತ್ ಅವರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಅಪರ ಜಿಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರನ್ನು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಂತ ಡಾ.ಬಸಂತಿ ಬಿಎಸ್ ಅವರನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಮುಖ್ಯ ಆಡಳಿತಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀನಿವಾಸ್ ಕೆ ಆರ್ ಅವರನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ಉಪ ವಿಭಾಗದ ಉಪ ವಿಭಾಗಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ಲಂಚ ಪಡೆಯುತ್ತಿದ್ದ ವೀಡಿಯೋ ವೈರಲ್ ಹಿನ್ನಲೆ: ಹಿರಿಯೂರು ತಾಲ್ಲೂಕಿನ ಕೆ.ಆರ್ ಹಳ್ಳಿ ‘VA ದಾಸೇಗೌಡ’ ಸಸ್ಪೆಂಡ್
BIG BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ವಾಪಾಸ್ ನೀಡಿದ್ದ 14 ಮುಡಾ ನಿವೇಶನಗಳ ಖಾತೆ ರದ್ದು