ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 9 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೆಳಕಂಡ ಕೆಎಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗುತ್ತಿದೆ ಅಂತ ತಿಳಿಸಿದೆ.
ಅಂದಹಾಗೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಹುದ್ದೆಗೆ ಕೆಎಎಸ್ ಅಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರನ್ನು ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ವಿಶೇಷ ಕಾರ್ಯದರ್ಶಿಯಾಗಿ ರಮೇಶ್ ದೇಸಾಯಿ ವರ್ಗಾಯಿಸಿದ್ರೇ, ವಿಜಯಪುರ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ಡಂಡಾಧಿಕಾರಿಯನ್ನಾಗಿ ಸೋಮಲಿಂಗಗೋಪಾಲ ಗೆಣ್ಣೂರ ಅವರನ್ನು ನೇಮಿಸಿದೆ.
ರಾಮನಗರ ಅಪರ ಜಿಲ್ಲಾಧಿಕಾರಿಯನ್ನಾಗಿ ಚಂದ್ರಯ್ಯ ಆರ್, ಬಿಬಿಎಂಪಿ ಆಸ್ತಿಗಳ ಉಪ ಆಯುಕ್ತರನ್ನಾಗಿ ಎಸ್ ಎಂ ಶಿವಕುಮಾರ್, ಶಿರಸಿ ಉಪ ವಿಭಾಗಾಧಿಕಾರಿಯನ್ನಾಗಿ ಕಾವ್ಯಾರಾಣಿ ಕೆ.ವಿ, ಯಾದಗಿರಿಯ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನವೀನ್ ಹೆಚ್.ವಿ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಹೀಗಿದೆ 9 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ
BREAKING: ರಾಜ್ಯದ ನಿಗಮ, ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಗಾಗಿ ಸಮಿತಿ ರಚಿಸಿ ‘ಸಿಎಂ ಸಿದ್ಧರಾಮಯ್ಯ’ ಆದೇಶ