ಬೆಂಗಳೂರು : ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಹಿರಿಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬೀಜ ಹಾಗೂ ಗೊಬ್ಬರಕ್ಕಾಗಿ ಹಾವೇರಿಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸರದಿ ಸಾಲಿನಲ್ಲಿ ನಿಂತಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.