ಶಿವಮೊಗ್ಗ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿ.ಎಸ್ಸಿ, ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಬಿಎಸ್ಸಿ ಅರಣ್ಯ ಶಾಸ್ತ್ರ ವ್ಯಾಸಂಗ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಆನಂದಪುರ ಬಳಿಯ ಕೆಳದಿ ಶಿವಪ್ಪ ನಾಯಕ ತೋಟಗಾರಿಕೆ ಮತ್ತು ವಿಜ್ಞಾನಗಳ ವಿವಿಯ ವಿದ್ಯಾರ್ಥಿಗಳು ಅರಣ್ಯ ಇಲಾಖೆಯಲ್ಲಿರುವ ಎಲ್ಲಾ ಹುದ್ದೆಗಳಿಗೂ ಅರಣ್ಯ ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟವಧಿ ಮುಸ್ಕರವನ್ನು ನಡೆಸಿದರು.
ಈ ವೇಳೆ ವಿದ್ಯಾರ್ಥಿಗಳು ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘ ಸಲ್ಲಿಸುವ ಮನವಿ ಏನೆಂದರೆ, ವೃತ್ತಿಪರ (ಅರಣ್ಯಶಾಸ್ತ್ರ) ಪದವೀಧರರ ಸಾಮರ್ಥ್ಯ ಮತ್ತು ಅಗತ್ಯವನ್ನು ಅರಿತುಕೊಂಡ ಕರ್ನಾಟಕ ಸರ್ಕಾರವು 2003 ರಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇಕಡ 50 ರಷ್ಟು ಮೀಸಲಾತಿಯನ್ನು ಒದಗಿಸಿದ ನಂತರ 2012 ರಲ್ಲಿ ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇ.75ರಷ್ಟು ಹೆಚ್ಚಿಸಲಾಯಿತು (ಸಂಖ್ಯೆ : FEE366:FNG2010 ಬೆಂಗಳೂರು, ದಿನಾಂಕ : 25.05.2012), ಕರ್ನಾಟಕ ಅರಣ್ಯ ಇಲಾಖೆಯ ಸೇವೆಗಳ (ನೇಮಕಾತಿ) ತಿದ್ದುಪಡಿ ನಿಯಮಗಳ ಅಡಿಯಲ್ಲಿ,2018ರಲ್ಲಿ ಪ್ರಸ್ತಾಪಿಸಲಾದ ಹೊಸ ಕರಡು ನಿಯಮಗಳು, (ಸಂಖ್ಯೆ FEE72FEG 2017 (P-1) ದಿನಾಂಕ : 11.12.2019) ಬಿ.ಎಸ್ಸಿ ಅರಣ್ಯಶಾಸ್ತ್ರ ಪದವೀಧರರಿಗೆ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಮೊದಲಿದ್ದ ಶೇ.75ರ ಮೀಸಲಾತಿಯನ್ನು ಶೇ.50ಕ್ಕೆ ಕಡಿಮೆಗೊಳಿಸಿರುತ್ತದೆ ಎಂಬುದಾಗಿ ಆಕ್ರೋಶ ಹೊರ ಹಾಕಿದರು.
ಈ ಆದೇಶ ವಿರುದ್ಧವಾಗಿಯೂ ಮತ್ತು ಟಿ ಎಮ್ ವಿಜಯ್ ಭಾಸ್ಕರ್ ಅವರು ಉಪ ವಲಯ ಅರಣ್ಯಾಧಿಕಾರಿಯ ಹುದ್ದೆಯ ನೇರ ನೇಮಕಾತಿಯನ್ನು ತೆಗೆದು ಶೇ.100ರಷ್ಟು ಹುದ್ದೆಗಳನ್ನು ಮುಂಬಡ್ತಿ ಹುದ್ದೆಯನ್ನಾಗಿ ಪರಿವರ್ತಿಸಬೇಕೆಂಬುದರ ಕುರಿತಾಗಿ ಸಲ್ಲಿಸಿದ್ದ 6ನೇಯ ಆಡಳಿತ ಸುಧಾರಣೆ ವರದಿಯ ಅಧ್ಯಾಯ 4ರ ಅಧಿಸೂಚನೆ ಸಂಖ್ಯೆ 81ನ್ನು ವಜಾಗೊಳಿಸುವಂತೆ ಹಿಂದೆ 2024ರಲ್ಲಿ ಪ್ರತಿಭಟನೆಯನ್ನು ನಡೆಸಲಾಗಿತ್ತು ಎಂದು ಹೇಳಿದ್ದಾರೆ.
ಅಂದು ನಮ್ಮ ಪ್ರತಿಭಟನೆಗೆ ಪರಿಗಣಿದಿದ್ದಂತ ರಾಜ್ಯ ಸರ್ಕಾರವು ವಿಶೇಷ ಸಮೀತಿಯನ್ನು ರಚಿಸುವುದರ ಮೂಲಕ ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಆಶ್ವಾಸನೆ ನೀಡಿತ್ತು. ಆದರೆ ಈವರೆಗೆ ರಾಜ್ಯ ಸರ್ಕಾರದಿಂದಾಗಲಿ ಅಥವಾ ರಚಿಸಿದ ಸಮೀತಿಯಿಂದಾಗಲಿ ಯಾವುದೇ ರೀತಿಯ ವರದಿ ಅಥವಾ ಅಧಿಸೂಚನೆಗಳು ಹೊರಬಂದಿರುವುದಿಲ್ಲ ಎಂಬುದಾಗಿ ಕಿಡಿಕಾರಿದರು.
ಈ ಹಿನ್ನೆಯಲ್ಲಿ ನಮ್ಮ ಬೇಡಿಕೆ ಈಡೇರಿಸಬೇಕು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿ.ಎಸ್ಸಿ, ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
BIG NEWS: ಪ್ರಿಯಕರನ ಜೊತೆ ಓಡಿ ಹೋದ ಪುತ್ರಿ: ಶೃದ್ದಾಂಜಲಿ ಬ್ಯಾನರ್ ಹಾಕಿ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ