ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳಗಾವಿ, ಕಲಬುರ್ಗಿಯಲ್ಲದೇ ಇತರೆ ಜಿಲ್ಲೆಗಳಲ್ಲಿಯೂ ಅಷ್ಟೇ ಪ್ರಮಾಣದಲ್ಲಿ ತಾಪಮಾನ ದಾಖಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರದಲ್ಲಿ ಮನವಿ ಮಾಡಲಾಗಿದೆ.

ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ವರ್ಷ ಬಿಸಿಲಿನ ತಾಪಮಾನ ತೀವ್ರತರವಾಗಿರುತ್ತದೆ. ರಾಜ್ಯದ ಬೆಳಗಾವಿ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಸರ್ಕಾರವು ಈ ಹಿಂದೆ ಸರ್ಕಾರಿ ಕಛೇರಿ ಕೆಲಸದ ವೇಳೆಯನ್ನು ಬೆಳಿಗ್ಗೆ 08-00 ರಿಂದ ಮಧ್ಯಾಹ್ನ 01-30ರವರೆಗೆ ನಿಗಧಿಪಡಿಸಿತ್ತು ಎಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮೇಲ್ಕಂಡ ವಿಭಾಗದ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬಿಸಿಲಿನ ತಾಪಮಾನ ಬೆಳಿಗ್ಗೆ 09.00 ಗಂಟೆಗೆ ತೀವ್ರತರವಾಗಿ 40-44 ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಸರ್ಕಾರಿ ನೌಕರರು ಕಛೇರಿಗೆ ತೆರಳಲು ಮತ್ತು ಸಾರ್ವಜನಿಕರೂ ಸಹ ಸರ್ಕಾರಿ ಕಛೇರಿಗೆ ಬರಲು ಕಷ್ಟಸಾಧ್ಯವಾಗುತ್ತಿರುವುದರಿಂದ ಬಿಸಿಲಿನ ತಾಪಮಾನ ಕಡಿಮೆಯಾಗುವವರೆಗೆ ಸರ್ಕಾರಿ ಕಛೇರಿಗಳ ಕೆಲಸದ ವೇಳೆಯನ್ನು ಮಾರ್ಪಡು ಮಾಡುವಂತೆ ರಾಜ್ಯದ ನೌಕರರು ವಿನಂತಿಸಿರುತ್ತಾರೆ ಎಂದು ಹೇಳಿದ್ದಾರೆ.

ಮೇಲಿನ ಅಂಶಗಳ ಹಿನ್ನೆಲೆಯಲ್ಲಿ; ಗರಿಷ್ಠ ತಾಪಮಾನದ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ತಾಪಮಾನ ಕಡಿಮೆ ಆಗುವವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಕಛೇರಿ ಕೆಲಸದ ವೇಳೆಯನ್ನು ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 01.30 ಗಂಟೆಯವರೆಗೆ ನಿಗದಿಪಡಿಸಿ ಆದೇಶ ಹೊರಡಿಸಲು ಕೋರಿದ್ದಾರೆ.

   

ಕಾಂಗ್ರೆಸ್ ನ ‘ಗ್ಯಾರಂಟಿ ಯೋಜನೆಗಳೇ’ ನನ್ನ ಕೈ ಹಿಡಿಯುತ್ತವೆ : ಗೀತಾ ಶಿವರಾಜ್ ಕುಮಾರ ವಿಶ್ವಾಸ

ನಾಳೆ ಬೆಳಗ್ಗೆ 10.30ಕ್ಕೆ ‘SSLC’ ಫಲಿತಾಂಶ ಪ್ರಕಟ : ಈ ರೀತಿ ‘ರಿಸಲ್ಟ್’ ಚೆಕ್ ಮಾಡಿ | Karnataka SSLC Exam results 2024

Share.
Exit mobile version