ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಕುಯ್ದ್ರೆ ಬರೋದು ಕೆಂಪು ರಕ್ತ ಅಲ್ಲ, ಬದಲಿಗೆ ಕೇಸರಿ ಅಂತ ನಟಿ, ಬಿಜೆಪಿ ನಾಯಕಿ ಮಾಳವಿಕ ಅವಿನಾಶ್ ಅವರು ಹೇಳಿದ್ದಾರೆ.
ಅವರು ಪುತ್ತೂರಿನಲ್ಲಿ ನಡೆದ ನಾರಿಶಕ್ತಿ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡುತ್ತ ಈ ಬಗ್ಗೆ ಹೇಳಿದರು. ಇದೇ ವೇಳೆ ಅವರು ಮಾತನಾಡಿ, 28ಕ್ಕೆ 28 ಕ್ಷೇತ್ರ ಗೆಲ್ಲುವ ಸವಾಲು ನಮ್ಮ ಮುಂದಿದೆ. ಇದಲ್ಲದೇ ಮತ್ತೊಮ್ಮೆ ಪ್ರಧಾನಿ ಆಗುವುದರಲ್ಲಿ ಸಂಶಯವಿಲ್ಲ. ಆದರೆ, ಎಷ್ಟು ಅಂತರದಲ್ಲಿ ಗೆಲ್ಲಿಸುತ್ತೇವೆ ಎಂಬ ಸವಾಲು ನಮ್ಮ ಮುಂದಿದೆ ಅಂಥ ಹೇಳಿದರು.