ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ದೇವಾಲಯಗಳಲ್ಲಿ ಒಂದು ಮಲೆ ಮಹದೇಶ್ವರ ಬೆಟ್ಟ. ಇಲ್ಲಿನ ಮಾದಪ್ಪ ಮತ್ತೆ ಕೋಟಿ ಒಡೆಯನಾಗಿದ್ದಾನೆ. ಕಳೆದ 35 ದಿನಗಳಲ್ಲಿ ಬರೋಬ್ಬರಿ 3.26 ಕೋಟಿ ಕಾಣಿಕೆ ಸಂಗ್ರಹವಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿಯಲ್ಲಿ ಸಂಗ್ರಹವಾಗಿದ್ದಂತ ಕಾಣಿಕೆಯನ್ನು ಏಣಿಕೆ ಮಾಡಲಾಯಿತು. ಈ ಬಾರಿ 35 ದಿನಗಳಲ್ಲಿ 3.26 ಕೋಟಿ ರೂಪಾಯಿ ಸಂಗ್ರಹವಾಗಿದೆ. ಅಲ್ಲದೇ 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ಕಾಣಿಕೆಯೂ ಸಂಗ್ರಹವಾಗಿದೆ.
ಇನ್ನೂ 11 ವಿದೇಶಿ ನೋಟುಗಳು, 2000 ರೂ ಮುಖಬೆಲೆಯ 20 ನೋಟುಗಳು ಸಂಗ್ರಹವಾಗಿದೆ. ಮಲೆ ಮಹದೇಶ್ವರ ಸ್ವಾಮಿಯ ಕಾಣಿಕೆ ಹುಂಡಿಯನ್ನು ಸಾಲೂರು ಶ್ರೀಗಳ ನೇತೃತ್ವದಲ್ಲಿ ನಡೆಸಲಾಯಿತು.
BREAKING : ಧಾರವಾಡದಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ!
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!