ನವದೆಹಲಿ : ಚುನಾವಣಾ ಬಾಂಡ್ಗೆ ಸಂಬಂಧಿಸಿದಂತೆ ಬಿಜೆಪಿ ತಪ್ಪಾಗಿ ದೇಣಿಗೆ ಪಡೆದು ತನ್ನ ಬೊಕ್ಕಸ ತುಂಬಿಕೊಂಡಿದ್ದು, ಇದೀಗ ಕಾಂಗ್ರೆಸ್ನ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಇಂದು ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ಕಾಂಗ್ರೆಸ್ ಚುನಾವಣೆ ಎದುರಿಸುವ ಬಿಕ್ಕಟ್ಟು ಎದುರಿಸುತ್ತಿದೆ. ಪ್ರಚಾರಕ್ಕಾಗಿ ನಮ್ಮ ಬಳಿ ಹಣವಿಲ್ಲ. ಸೀತಾರಾಮ್ ಕೇಸರಿ ಅವರ ಕಾಲದ ನಿಧಿಗೆ ಸಂಬಂಧಿಸಿದಂತೆ ನಮಗೆ ನೋಟಿಸ್ ನೀಡಲಾಗುತ್ತಿದೆ ಎಂದರು.
ದುರದೃಷ್ಟವಶಾತ್ ಇತ್ತೀಚೆಗೆ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿದ ನಂತರ ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದಂತೆ ಹೊರಬಿದ್ದಿರುವ ಸಂಗತಿಗಳು ಆತಂಕಕಾರಿ ಹಾಗೂ ನಾಚಿಕೆಗೇಡಿನ ಅಂಗತಿಯಾಗಿದೆ ಎಂದು ಅವರು ಹೇಳಿದರು. ಇದು ದೇಶದ ಪ್ರತಿಷ್ಠೆಗೆ ಧಕ್ಕೆ ತಂದಿದೆ, 70 ವರ್ಷಗಳಲ್ಲಿ ನಮ್ಮ ದೇಶದಲ್ಲಿ ನಿರ್ಮಿಸಲಾದ ನ್ಯಾಯಯುತ ಚುನಾವಣೆ ಹಾಗೂ ಆರೋಗ್ಯಕರ ಪ್ರಜಾಪ್ರಭುತ್ವದ ಚಿತ್ರವನ್ನು ಪ್ರಶ್ನೆ ಮಾಡಲಾಗುತ್ತಿದೆ.
ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ಗುರಿಯಾಗಿಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಬಿಜೆಪಿ ಚುನಾವಣಾ ಸಂಪನ್ಮೂಲಗಳ ಏಕಸ್ವಾಮ್ಯವನ್ನು ಹೊಂದಿದೆ ಎಂದು ಖರ್ಗೆ ಆರೋಪಿಸಿದರು.ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಪ್ರಧಾನಿಯವರಿಂದ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಏಳು ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 19 ರಂದು ಆರಂಭವಾಗಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.