ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ ಕುರಿತಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.ಆದರೆ ಇದಕ್ಕೆ ಛಲವಾದಿ ನಾರಾಯಣಸ್ವಾಮಿ ಅವರು ಮೂಲತಃ ಕಾಂಗ್ರೆಸ್ಸಿಗರು. ಅವರ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರ ಕೃಪೆ ಇದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಈ ಕುರಿತು ಟ್ವೀಟ್ ನಲ್ಲಿ ಕಾಂಗ್ರೆಸ್ ನಾಯಕರು ಮಾತನಾಡಿರುವ ಬಗ್ಗೆ ಕಾಂಗ್ರೆಸ್ ಹಂಚಿಕೊಂಡಿದ್ದು, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ವಾಜಿದ ಅವರು ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ಅವರು ಮೂಲತಃ ಕಾಂಗ್ರೆಸ್ಸಿಗರು. ಅವರ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರ ಕೃಪೆ ಇದೆ. ಇಂಥವರಿಗೆ ಖರ್ಗೆ ವಿರುದ್ಧ ಮಾತನಾಡುವ ಯೋಗ್ಯತೆ ಇದೆಯೇ?
ಬಿಜೆಪಿ, ಆರ್‌ಎಸ್‌ಎಸ್ ನಾಯಕರನ್ನು ಮೆಚ್ಚಿಸುವುದಕ್ಕಾಗಿ ನಾರಾಯಣಸ್ವಾಮಿ ಅವರು ಖರ್ಗೆ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ನಮ್ಮ ನಾಯಕರ ವಿರುದ್ಧ ಮಾತನಾಡುವುದನ್ನು ಬಿಡದಿದ್ದರೆ ನಾವು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇನ್ನೂ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆವಿ. ಗೌತಮ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಂದಲೇ ರಾಜಕೀಯವಾಗಿ ಅವಕಾಶಗಳನ್ನು, ಸ್ಥಾನಮಾನಗಳನ್ನು ಪಡೆದುಕೊಂಡು ಈಗ ಅವರ ಕುಟುಂಬದ ವಿರುದ್ಧವೇ ಮಾತನಾಡುತ್ತಿರುವುದು ನಾಚಿಕೆಗೇಡು. ಸರ್ಕಾರದಿಂದ ಶೈಕ್ಷಣಿಕ ಉದ್ದೇಶಕ್ಕಾಗಿ ಸಿಎ ಸೈಟ್ ಪಡೆದು ಈಗ ಅದರಲ್ಲಿ ಬಿರಿಯಾನಿ ಸೆಂಟರ್ ನಡೆಸುತ್ತಿದ್ದಾರೆ. ಇಂಥವರಿಗೆ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಇಲ್ಲ.
ಅದೇ ರೀತಿ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕೆ. ನಂದಕುಮಾರ್ ಅವರು ಛಲವಾದಿ ನಾರಾಯಣಸ್ವಾಮಿ ಅವರಿಗೆ ತಮ್ಮ ಸಮಾಜವನ್ನು ಅಭಿವೃದ್ಧಿ ಮಾಡುವ ಛಲದ ಬದಲು ತಮ್ಮ ಸ್ವಂತ ಆಸ್ತಿ ಮಾಡಿಕೊಳ್ಳುವ ಛಲ ಇದೆ.ನಾರಾಯಣಸ್ವಾಮಿ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬದ ವಿರುದ್ಧ ಮಾತನಾಡುವುದನ್ನು ನಿಲ್ಲಿಸಬೇಕು. ಈಗ ಬಿಜೆಪಿಯಲ್ಲಿ ದೊಡ್ಡ ನಾಯಕರಂತೆ ಮೆರೆಯುತ್ತಿದ್ದಾರೆ. ಬಿಜೆಪಿ ‘ಯೂಸ್ ಅಂಡ್ ಥ್ರೊ’ ಪಕ್ಷ, ಮುಂದಿನ ದಿನಗಳಲ್ಲಿ ಅವರ ಸ್ಥಿತಿಯೂ ಹೀಗೇ ಆಗಲಿದೆ.
ಛಲವಾದಿ ನಾರಾಯಣಸ್ವಾಮಿ ಅವರು ಮೂಲತಃ ಕಾಂಗ್ರೆಸ್ಸಿಗರು. ಅವರ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರ ಕೃಪೆ ಇದೆ. ಇಂಥವರಿಗೆ ಖರ್ಗೆ ವಿರುದ್ಧ ಮಾತನಾಡುವ ಯೋಗ್ಯತೆ ಇದೆಯೇ?
ಬಿಜೆಪಿ, ಆರ್‌ಎಸ್‌ಎಸ್ ನಾಯಕರನ್ನು ಮೆಚ್ಚಿಸುವುದಕ್ಕಾಗಿ ನಾರಾಯಣಸ್ವಾಮಿ ಅವರು ಖರ್ಗೆ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ನಮ್ಮ ನಾಯಕರ ವಿರುದ್ಧ… pic.twitter.com/L30XaUZiIs
— Karnataka Congress (@INCKarnataka) September 11, 2024