Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ: ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ

13/04/2026 9:59 PM

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

13/04/2026 9:36 PM

ಬೆಂಗಳೂರು-ಮುಂಬೈ ನಡುವೆ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

13/04/2026 9:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ
KARNATAKA

ಮಲ್ಲಿಕಾರ್ಜುನ ಖರ್ಗೆಯವರೇ ನಾಲಿಗೆ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: MLC ಛಲವಾದಿ ನಾರಾಯಣಸ್ವಾಮಿ

By kannadanewsnow0908/04/2026 6:19 PM

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕು. ಅರಳು- ಮರಳು ರೀತಿ ಮಾತನಾಡಬಾರದು. ಇವರ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಮತ್ತು ಆರ್‍ಎಸ್‍ಎಸ್ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವುದು ಖಂಡನೀಯ. ದೇಶದಾದ್ಯಂತ ಜನರು ಇವರ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಕೊಲ್ಲಲು ಪ್ರಚೋದನೆ ನೀಡುವುದು ಸರಿ ಅಲ್ಲ ಎಂದರು.

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಅಂಗೀಕಾರ ದೊರೆತಿದೆ. ಆ ಮಸೂದೆ ಅನ್ವಯ ಖರ್ಗೆ ಅವರ ರೀತಿ ಪ್ರಚೋದನಾಕಾರಿಯಾಗಿ ಮಾತನಾಡಿದರೆ ಪ್ರಕರಣ ದಾಖಲು ಮಾಡಬಹುದು. ಆದ್ದರಿಂದ ಬಿಜೆಪಿ ದೂರು ನೀಡಿದೆ. ಖರ್ಗೆ ಅವರ ಹೇಳಿಕೆ ಖಂಡಿಸಿ ಬಿಜೆಪಿಯ ಕಾರ್ಯಕರ್ತರು ಸಿಡಿದೆದ್ದು ಎಲ್ಲಾ ಕಡೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು.

ರಜಾಕರಿಂದ ತಮ್ಮ ಕುಟುಂಬದ ಮೇಲೆ ದಾಳಿ ನಡೆದಿದೆ ಎಂದು ಖರ್ಗೆ ಅವರೇ ಹೇಳಿದ್ದಾರೆ. ತಮ್ಮ ಮನೆತನ ಹಾಳು ಮಾಡಿದವರ ವಿರುದ್ಧ ಮಾತನಾಡುವುದನ್ನು ಬಿಟ್ಟು ಬಿಜೆಪಿ ಮತ್ತು ಆರ್‍ಎಸ್‍ಎಸ್ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಹೇಳಿದರು. ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಮಗ ಪ್ರಿಯಾಂಕ್ ಖರ್ಗೆ ಅವರು ಬೆಂಬಲ ನೀಡಿದ್ದಾರೆ. ಇದು ಬೇವಿನ ಕಾಯಿಗೆ ಹಾಗಲಕಾಯಿ ಸಾಕ್ಷಿ ಇದ್ದಂತೆ. ಇವರಿಬ್ಬರ ಮನಸ್ಥಿತಿ ಒಂದೇ ಆಗಿದೆ ಆಗಿದೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ಬೆಂಬಲಕ್ಕೆ ಕಾಂಗ್ರೆಸ್‍ನಿಂದ ಯಾರೂ ಬಂದಿಲ್ಲ. ಪ್ರಿಯಾಂಕ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಕಾಂಗ್ರೆಸ್‍ನಿಂದ ಮೂಲೆಗುಂಪಾದ ಇವರಿಬ್ಬರು ತಮ್ಮನ್ನು ತೋರಿಸಿಕೊಳ್ಳಲು ಈ ರೀತಿಯ ಹಗೆತನದ ಹೇಳಿಕೆ ನೀಡಿದ್ದಾರೆ. ಅಪ್ಪ ಮತ್ತು ಮಗನ ತಲೆಯಲ್ಲಿ ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಇದೆ ಎಂದು ವ್ಯಂಗ್ಯವಾಡಿದರು.

ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕೇಂದ್ರ ಸರ್ಕಾರವು ಸ್ವಯಂಪ್ರೇರಿತ ದೂರು ದಾಖಲಿಸಿ ತಿಹಾರ್ ಜೈಲಿಗೆ ಕಳಿಸಬೇಕು. ಆಗ ಇವರು ಇಂತಹ ವಿಷಕಾರಿ ಹೇಳಿಕೆ ನೀಡುವುದಿಲ್ಲ. ವಯಸ್ಸಾಗಿರುವ ಖರ್ಗೆ ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇದೆ. ಜೈಲಿಗೆ ಹಾಕಿದರೆ ವಿಶ್ರಾಂತಿ ಸಿಗಲಿದೆ. ಮಗ ಅಲ್ಲೇ ಇದ್ದರೆ ಸಹಾಯವಾಗುತ್ತೆ ಎಂದರು.

ಮಾತೆತ್ತಿದರೆ ತಾವು ದಲಿತರು ಅಂತ ಖರ್ಗೆ ಹೇಳುತ್ತಾರೆ. ದಲಿತ ಅನ್ನೋ ಕಾರಣಕ್ಕೇ ಏನು ಬೇಕಾದರೂ ಮಾತನಾಡಬಾರದು. ವಿಷಕಾರಿ ನಾಲಿಗೆ ಹರಿಬಿಟ್ಟು ಕೆಟ್ಟ ಪದ ಬಳಸಿದಾಗ ಬೇರೆಯವರು ನಿಂದಿಸಿದರೆ ನೀವು ದಲಿತ ಕಾರ್ಡ್ ಚಲಾವಣೆ ಮಾಡ್ತೀರಿ. ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾದ ಮೇಲೆ ಜಾತಿ ಬಿಟ್ಟು ಮಾತನಾಡಬೇಕು. ಜಾತಿ ಟ್ಯಾಗ್ ಮಾಡಿಕೊಂಡು ಮಾತನಾಡಬಾರದು. ಕಾಂಗ್ರೆಸ್‍ಗೆ ಖರ್ಗೆ ಅವರಿಂದ ಬಾಗಿಲು ಹಾಕಿಸುವ ಕೆಲಸ ಮಾಡಬೇಡಿ ಎಂದು ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಗೆ ಕಿವಿಮಾತು ಹೇಳಿದರು.

‘ಆಪರೇಷನ್ ಎಪಿಕ್ ಫ್ಯೂರಿ’ಗೆ ಇರಾನ್ ತತ್ತರ: ಕದನ ವಿರಾಮಕ್ಕಾಗಿ ಇರಾನ್ ಬೇಡಿಕೊಂಡಿದೆ ಎಂದ ಅಮೆರಿಕ ರಕ್ಷಣಾ ಸಚಿವ

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿಗೆ ‘ರಾಜ್ಯ ಸಚಿವ ಸ್ಥಾನ’ ನೀಡಿ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ: ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ

13/04/2026 9:59 PM1 Min Read

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

13/04/2026 9:36 PM2 Mins Read

ಬೆಂಗಳೂರು-ಮುಂಬೈ ನಡುವೆ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

13/04/2026 9:32 PM2 Mins Read
Recent News

ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ: ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ

13/04/2026 9:59 PM

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

13/04/2026 9:36 PM

ಬೆಂಗಳೂರು-ಮುಂಬೈ ನಡುವೆ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

13/04/2026 9:32 PM

ಹಾರ್ಮುಜ್ ಜಲಸಂಧಿ ಸಂಚಾರಕ್ಕೆ ಭಾರತ ಹಣ ನೀಡಬೇಕೇ? ವದಂತಿಗಳಿಗೆ ಇರಾನ್ ರಾಯಭಾರಿ ನೀಡಿದ ಸ್ಪಷ್ಟನೆ ಹೀಗಿದೆ!

13/04/2026 9:02 PM
State News
KARNATAKA

ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ: ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ

By kannadanewsnow0913/04/2026 9:59 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಸೋಮವಾರದಂದು ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ…

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

13/04/2026 9:36 PM

ಬೆಂಗಳೂರು-ಮುಂಬೈ ನಡುವೆ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

13/04/2026 9:32 PM

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.