ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಭರ್ಜರಿ ಗೆಲವು ಪಡೆದಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ನಾಳೆ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಮಾರಂಭಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ.
Gold prices: ದೀಪಾವಳಿ ಹಬ್ಬದ ಹೊತ್ತಲ್ಲೇ ಇಳಿಕೆಯಾದ ಬಂಗಾರದ ಬೆಲೆ: ಬೆಳ್ಳಿ ದರವೂ ಇಳಿಕೆ
ಗಾಂಧಿ ಕುಟುಂಬ ಅಧ್ಯಕ್ಷ ಸ್ಪರ್ಧೆಯಿಂದ ಹೊರಗುಳಿದ ನಂತರ ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆಗೆ ನೇರ ಸ್ಪರ್ಧೆಯಲ್ಲಿ ಖರ್ಗೆ ಅವರು ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ಸೋಲಿಸುವ ಮೂಲಕ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆಯವರು ಅಧಿಕಾರ ಪಡೆಯಲಿದ್ದಾರೆ.
ಕಾರ್ಯಕ್ರಮಕ್ಕಾಗಿ ಎಐಸಿಸಿ ಪ್ರಧಾನ ಕಛೇರಿಯ ಕಾಂಗ್ರೆಸ್ ಅಧ್ಯಕ್ಷರ ಕಚೇರಿ ಕೊಠಡಿಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಕಾರ್ಯಕರ್ತರು ಭರದಿಂದ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಔಪಚಾರಿಕವಾಗಿ ಚುನಾವಣಾ ಪ್ರಮಾಣಪತ್ರವನ್ನು ಖರ್ಗೆ ಅವರಿಗೆ ಹಸ್ತಾಂತರಿಸಲಿದ್ದು, ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.
ನೂರಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ 24 ವರ್ಷಗಳ ಬಳಿಕ ಗಾಂಧಿ ಕುಟುಂಬವನ್ನು ಹೊರತಾಗಿ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗುತ್ತಿದ್ದಾರೆ.