ಬೆಂಗಳೂರು: ನಾನು ಕಾಂಗ್ರೆಸ್ ಪಕ್ಷದ ( Congress Party ) ಸಂಘಟನೆಯ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ( Congress President Election 2022 ) ಅಭ್ಯರ್ಥಿಯಾಗಿದ್ದೇನೆ. ಗಾಂಧಿ ಕುಟುಂಬ ಚುನಾವಣೆಯಿಂದ ಹಿಂದೆ ಸರಿದು, ಬೇರೆಯವರಿಗೆ ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಆರಂಭದಲ್ಲಿ ನನಗೆ ಈ ಚುನಾವಣೆ ಬಗ್ಗೆ ಆಸಕ್ತಿ ಇಲ್ಲದಿದ್ದರೂ ರಾಜ್ಯ ಪ್ರಮುಖ ನಾಯಕರು, ರಾಷ್ಟ್ರ ಹಾಗೂ ಬೇರೆ ರಾಜ್ಯದ ನಾಯಕರ ಸಲಹೆ ಮೇರೆಗೆ ಸ್ಪರ್ಧಿಸುತ್ತಿದ್ದೇನೆ. ಕಳೆದ 55 ವರ್ಷಗಳಿಂದ ನೀವು ಪಕ್ಷವನ್ನು ಸಂಘಟಿಸುತ್ತಿದ್ದು, ನೀವು ಸ್ಪರ್ಧಿಸಬೇಕು ಎಂದು ಹಲವು ನಾಯಕರು ನನಗೆ ಒತ್ತಾಯಿಸಿದರು ಎಂಬುದಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ( Mallikarjuna Kharge ) ತಿಳಿಸಿದ್ದಾರೆ.
ಅವರು ಇಂದು ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಭಾರತ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಕಲ್ಯಾಣ ಕರ್ನಾಟಕದ ಬಳ್ಳಾರಿ ಭಾಗಕ್ಕೆ ಆಗಮಿಸಿದ್ದೇನೆ. ಆರ್ಟಿಕಲ್ 371 ಜಾರಿಗೆ ತಂದಿದ್ದು, ಕಾಂಗ್ರೆಸ್ ಸರ್ಕಾರ. ಸಂಸತ್ತಿನಲ್ಲಿ ಕಾಂಗ್ರೆಸ್ ಗೆ ಕೇವಲ 208 ಸಂಸದರಿದ್ದರು. ಈ ವಿಶೇಷ ಸ್ಥಾನಮಾನ ನೀಡಲು ಅಂಗೀಕರಿಸಲು 381 ಸಂಸದರ ಬೆಂಬಲ ಬೇಕಿತ್ತು. ಆದರೂ ಸೋನಿಯಾ ಗಾಂಧಿ ಅವರು ವಿಶೇಷ ಆದ್ಯತೆ ನೀಡಿ ಎಲ್ಲಾ ಬೆಂಬಲ ಪಡೆದು ಈ ಭಾಗಕ್ಕೆ ಅನುಕೂಲ ಮಾಡಿಕೊಟ್ಟಿದ್ದು, ಹೀಗಾಗಿ ಈ ಭಾಗದ ಕಾರ್ಯಕ್ರಮಕ್ಕೆ ಭಾಗಿಯಾಗಲು ಬಂದಿದ್ದೇನೆ ಎಂದರು.
‘ಮೀನು ಪ್ರಿಯ’ ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ‘ಬಿಬಿಎಂಪಿ ವಾರ್ಡ್’ಗಳಲ್ಲಿ ‘ಮೀನು ಆಹಾರ ಮಳಿಗೆ’ ಪ್ರಾರಂಭ
ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಇತ್ತಾದರೂ ಎಲ್ಲರೂ ಭಾರತ ಐಕ್ಯತಾ ಯಾತ್ರೆಯಲ್ಲಿ ಭಾಗವಹಿಸುವುದರಿಂದ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ. ಸಾಮಾನ್ಯ ಸದಸ್ಯತ್ವದಿಂದ, ಬ್ಲಾಕ್, ಜಿಲ್ಲಾ ಮಟ್ಟದ ಸಮಿತಿಯಿಂದ ಕೆಪಿಸಿಸಿ ಅಧ್ಯಕ್ಷನಾಗಿ, ಶಾಸಕ, ಮಂತ್ರಿಯಿಂದ ಸಿಎಲ್ ಪಿ ನಾಯಕನಾಗಿ ಕೆಲಸ ಮಾಡಿದ್ದು ನನ್ನ ರಾಜಕೀಯ ಜೀವನ ಕರ್ನಾಟಕದಿಂದಲೇ ಆರಂಭವಾಗಿದೆ. ರಾಜ್ಯ ನಾಯಕರು ನನಗೆ ಬೆಂಬಲ ನೀಡುವುದರಲ್ಲಿ ಸಂಶಯವಿಲ್ಲ. ಆದರೆ ನನ್ನ ಕರ್ತವ್ಯ ಹಿನ್ನೆಲೆಯಲ್ಲಿ ನಾನು ಎಲ್ಲರಿಗೂ ಬೆಂಬಲ ನೀಡುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ಇಂದು ದೇಶದಲ್ಲಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಬೆಂಬಲಿತ ಸರ್ಕಾರ ಸಂವಿಧಾನಕ್ಕೆ ತಿಲಾಂಜಲಿ ಕೊಟ್ಟಿದ್ದು, ಸಂವಿಧಾನ ರೀತಿ ನಡೆದುಕೊಳ್ಳುತ್ತಿಲ್ಲ. ಐಟಿ ಇಡಿ ಮೂಲಕ ಚುನಾಯಿತ ಸರ್ಕಾರ ಕೆಡವುತ್ತಿದ್ದಾರೆ. ಅವರ ಪಕ್ಷ ಸೇರಲು ಒಪ್ಪದಿದ್ದರೆ ಕೇಸ್ ಮುಂದುವರಿಸುತ್ತಾರೆ. ಇಲ್ಲಿ ಕಳಂಕಿತರು ಅಲ್ಲಿ ಹೋಗಿ ಕ್ಲೀನ್ ಆಗುತ್ತಾರೆ. ದೇಶದ 6-7 ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಕೆಡವಲಾಗಿದೆ. ಇನ್ನು ದೇಶದಲ್ಲಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ಇದೆಲ್ಲವನ್ನೂ ಎದುರಿಸಲು ಕಾಂಗ್ರೆಸ್ ಶಕ್ತಿಶಾಲಿಯಾಗಬೇಕು ಎಂದು ಹೇಳಿದರು.
ಹೆಂಡ್ತಿ ಗರ್ಭಿಣಿಯಾಗಲು ಅತ್ಯಾಚಾರ ಪ್ರಕರಣದ ಅಪರಾಧಿಗೆ ಪೆರೋಲ್ ನೀಡಿದ ಹೈಕೋರ್ಟ್
ಇದು ಒಬ್ಬರಿಂದ ಆಗುವ ಕೆಲಸ ಅಲ್ಲ. ಎಲ್ಲರೂ ಒಟ್ಟಾಗಿ ಸೇರಿ ಸಂಘಟನೆ ಮಾಡಬೇಕು. ಆಮೂಲಕ ನಿರುದ್ಯೋಗ, ಹಣದುಬ್ಬರ, ಜಿಡಿಪಿ ಕುಸಿತ, ರೂಪಾಯಿ ಮೌಲ್ಯ ಕುಸಿತ, ಆರ್ಥಿಕ ಹಿನ್ನಡೆ, ಖಾಸಗೀಕರಣ, ಉದ್ಯೋಗ ನಷ್ಟ ಕಡಿಮೆ ಆಗುತ್ತಿದೆ. ದುರ್ಬಲ ವರ್ಗದವರಿಗೆ ಮೀಸಲಾತಿ ಉದ್ಯೋಗ ಸಿಗುತ್ತಿಲ್ಲ. ನಾನು ವಿದ್ಯಾರ್ಥಿ ಘಟ್ಟದಿಂದ ಈ ವಿಚಾರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಈ ಪಕ್ಷಕ್ಕೆ ಬಲ ತುಂಬುತ್ತಾ ಬಂದಿದ್ದೇನೆ. ನಾವು ಸಂಘಟನೆಗೆ ಶಕ್ತಿ ತುಂಬಲು
ಈ ಮನವಿ ಮಾಡುತ್ತಿದ್ದೇನೆ ಎಂದರು.
ಶಶಿ ತರೂರ್ ಅವರಿಗೆ ಯಾವ ಸಲಹೆ ನೀಡುತ್ತೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ ನಾನು ಈ ವಿವಾದಾತ್ಮಕ ವಿಚಾರವಾಗಿ ಮಾತನಾಡುವುದಿಲ್ಲ. ನಾನು ನನ್ನ ವಿಚಾರವನ್ನು ಮಾತ್ರ ಮಾತನಾಡುತ್ತೇನೆ. ಅವರ ವಿಚಾರದ ಬಗ್ಗೆ ಚರ್ಚೆ ಮಾಡಲು ಬಯಸುವುದಿಲ್ಲ. ಇದು ನಮ್ಮ ಮನೆ ವಿಚಾರ. ಇಲ್ಲಿ ಅವರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಅಧಿಕಾರ ಇದೆ. ಇದು ಪಕ್ಷದ ಆಂತರಿಕವಾಗಿ ನಡೆಯುತ್ತಿರುವ ಸ್ನೆಹಯುತ ಸ್ಪರ್ಧೆ. ನಾನು ಕಾಂಗ್ರೆಸ್ ಪಕ್ಷದ ತಳಮಟ್ಟದಿಂದ ಇಲ್ಲಿಯವರೆಗೂ ನಾನು ಬೆಳೆದು ಬಂದಿದ್ದು, ಆ ಬಗ್ಗೆ ನಾನು ಮಾತನಾಡುತ್ತೇನೆ ‘ ಎಂದರು.
ರಾಜ್ಯದ ಮೀನುಗಾರರಿಗೆ ಸಿಎಂ ಬೊಮ್ಮಾಯಿ ದೀಪಾವಳಿ ಗಿಫ್ಟ್: ಸಹಾಯಧನ ಯೋಜನೆ 300 ಮೀನುಗಾರರಿಂದ 1000ಕ್ಕೆ ಹೆಚ್ಚಳ
ಖರ್ಗೆ ಅವರು ಗಾಂಧಿ ಕುಟುಂಬದ ನಿಯಂತ್ರಣದಲ್ಲಿ ಕೆಲಸ ಮಾಡುತ್ತಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ‘ ಅವರಿಗೆ ಚರ್ಚೆ ಮಾಡಲು ಬೇರೆ ವಿಷಯ ಸಿಗುತ್ತಿಲ್ಲ. ಕಳೆದ 20 ವರ್ಷಗಳಿಂದ ಸೋನಿಯಾ ಗಾಂಧಿ ಅವರು ಪಕ್ಷ ಸಂಘಟನೆ ಮಾಡಿ ಹಲವು ಕಾನೂನು ತಂದು ಬಡವರ ಹೊಟ್ಟೆ ತುಂಬುವ ಆಹಾರ ಭದ್ರತೆ, ಶಿಕ್ಷಣ ಹಕ್ಕು, ನರೆಗಾದಂತಹ ಯೋಜನೆ ತಂದಿದ್ದಾರೆ. ಇಂತಹ ಯೋಜನೆಗಳಿಗೆ ಬೆಂಬಲ ನೀಡಬೇಕು. ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ 6 ರಾಜ್ಯಗಳಲ್ಲಿ ಸರ್ಕಾರ ಮಾಡಿದ್ದೆವು. ಮೋದಿ ಹಾಗೂ ಅಮಿತ್ ಶಾ ಅವರು ಸಾಂವಿಧಾನಿಕ ಸಂಸ್ಥೆ ದುರ್ಬಳಕೆ ಮಾಡಿಕೊಂಡು ಒಂದೊಂದಾಗಿ ಸರ್ಕಾರ ಕೆಡವಿದರು. ಆ ಕುಟುಂಬ ಪಕ್ಷಕ್ಕೆ ಸೇವೆ ಸಲ್ಲಿಸಿಕೊಂದು ಬಂದಿದೆ ಎಂದು ಹೇಳಿದರು.
ಪಂಡಿತ್ ನೆಹರೂ ಅವರಿಂದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಹತ್ತು ಹಲವು ಯೋಜನೆಗಳು, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ನಂತರ ಪಕ್ಷ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅಧಿಕಾರ ಸ್ವೀಕಾರ ಮಾಡಲಿಲ್ಲ. ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ ಆ ಹುದ್ದೆ ನೀಡಿದರು. 10 ವರ್ಷಗಳಲ್ಲಿ ಹಲವು ಪ್ರಗತಿಪರ ಯೋಜನೆಗಳು ಬಂದವು. ಕೆಲ ಚುನಾವಣೆ ಕಳೆದುಕೊಂಡ ಹಿನ್ನೆಲೆಯಲ್ಲಿ ಇಂತಹ ಮಾತು ಹೇಳುವುದು ಸರಿಯಲ್ಲ. ಒಳ್ಳೆಯ ವಿಚಾರಗಳು ಇದ್ದರೆ ಅವರ ಸಲಹೆ ಪಡೆಯುತ್ತೇನೆ. ಉತ್ತಮ ಸಲಹೆ ನೀವು ಕೊಟ್ಟರೂ ಸ್ವೀಕರಿಸುತ್ತೇವೆ. ಅವರು ಈ ಪಕ್ಷಕ್ಕೆ ದುದಿದಿದ್ದು, ಅವರ ಸಲಹೆ ಪಡೆಯುತ್ತೇನೆ. ಅದು ನನ್ನ ಕರ್ತವ್ಯ. 20 ವರ್ಷಗಳ ಅವರ ಅನುಭವ ನಾನು ಕಲಿಯಬೇಕಿದೆ ‘ ಎಂದರು.
‘ಚರ್ಮ ಗಂಟು ರೋಗ’ದ ಬಗ್ಗೆ ರೈತರಿಗೊಂಡು ಮಹತ್ವದ ಮಾಹಿತಿ: ಈ ‘ಮನೆಮದ್ದು ಚಿಕಿತ್ಸೆ’ ಮಾಡಿ | Lumpy Skin Disease
ಈ ಚುನಾವಣೆ ರಾಜ್ಯದ ಮೇಲೆ ಪ್ರಭಾವ ಬೀರುತ್ತದೆಯೆ ಎಂಬ ಪ್ರಶ್ನೆಗೆ, ‘ ನಮ್ಮ ರಾಜ್ಯದಲ್ಲಿ ಸಾಕಷ್ಟು ಮುಖಂಡರು ಇದ್ದಾರೆ. ರಾಜ್ಯದಲ್ಲಿ ಸದನದ ಒಳಗೆ ಹಾಗೂ ಹೊರಗೆ ಹೋರಾಡುತ್ತಿದ್ದಾರೆ. ಹೀಗಾಗಿ ನನ್ನಿಂದ ಎಲ್ಲಾ ಪ್ರಯೋಜನ ಆಗಲಿದೆ ಎಂದು ನಾನು ಹೇಳುವುದಿಲ್ಲ. ಏನೇ ಆದರೂ ಅದು ಎಲ್ಲಾ ನಾಯಕರ ಸಾಮೂಹಿಕ ನೇತೃತ್ವದ ಫಲ. ಇದನ್ನೇ ನಾನು ನಂಬಿದ್ದೇನೆ ‘ ಎಂದರು.
ಕಾಂಗ್ರೆಸ್ ನಾಯಕರು ಸಹಕಾರ ನೀಡುತ್ತಿಲ್ಲ ಎಂಬ ಶಶಿ ತರೂರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ ನಾನು ಹಾಗೂ ನನ್ನ ಚುನಾವಣಾ ಪ್ರಚಾರದ ಅಧಿಕಾರಿಗಳು ನನ್ನ ಪರವಾಗಿ ಸಂಘಟನೆ ಮಾಡುತ್ತಿದ್ದಾರೆ. ನಮ್ಮ ಬಳಿ ಬಂದವರನ್ನು ಬೇರೆಯವರ ಜೊತೆ ಕಲಿಸಲು ಆಗುತ್ತದೆ? ನನಗೆ ಹಲವು ಹಿರಿಯ ನಾಯಕರು ಹಾಗೂ ಪದಾಧಿಕಾರಿಗಳು ಬೆಂಬಲ ನೀಡಿ ಚುನಾವಣೆಗೆ ಸ್ಪರ್ಧಿಸುವಂತೆ ಮಾಡಿದ್ದಾರೆ. ನಾನು ಇದನ್ನು ನಿರೀಕ್ಷೆ ಮಾಡಿಲ್ಲದಿದ್ದರೂ ನನಗೆ ಬೆಂಬಲ ನೀಡಿದ್ದಾರೆ. ನನಗೆ ಸಂಪುಟ ಸ್ಥಾನಮಾನಕ್ಕಿಂತ ಸಂಘಟನೆಯೇ ಮುಖ್ಯ. ನಾನು 50 ವರ್ಷಗಳಲ್ಲಿ ಎಲ್ಲವೂ ಒಂದೊಂದಾಗಿ ಸಿಕ್ಕಿದೆ. ಎಲ್ಲರಿಗೂ ನಾನು ಏನು ಎಂದು ಗೊತ್ತಿದೆ. ಹಾಗೆಂದು ಇನ್ನೊಬ್ಬರನ್ನು ನಾನು ಟೀಕಿಸುವಿದಿಲ್ಲ. ಅವರ ಹೇಳಿಕೆ ಅವರದ್ದಾಗಿದೆ ‘ ಎಂದು ತಿಳಿಸಿದರು.
2019ರ ಚುನಾವಣೆಯಲ್ಲಿ ನಿಮ್ಮನ್ನು ಸೋಲಿಸಿ ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದವರಿಗೆ ಏನು ಹೇಳಬಯಸುತ್ತೀರಿ ಎಂದು ಕೇಳಿದಾಗ, ‘ ನಾನು ಎಂದಿಗೂ ಯಾವುದೇ ಸ್ಥಾನ ಬಯಸಿರಲಿಲ್ಲ. ವಿರೋಧ ಪಕ್ಷದ ನಾಯಕ ಸ್ಥಾನ, ಈ ಅವಕಾಶವನ್ನು ನಿರೀಕ್ಷೆ ಮಾಡಿರಲಿಲ್ಲ. 1994ರಲ್ಲಿ ರಾಜ್ಯದಲ್ಲಿ ನಮ್ಮ ಸರ್ಕಾರ ಬಿದ್ದ ನಂತರ ವಿರೋಧ ಪಕ್ಷದ ನಾಯಕ ಆಗುತ್ತೇನೆ ಎಂದು ನಿರೀಕ್ಷೆ ಮಾಡಿರಲಿಲ್ಲ. 2008ರಲ್ಲಿ ಶಾಸಗಾಂಗ ಪಕ್ಷದ ನಾಯಕನಾಗಿದ್ದೆ. ನಾನು ಪಕ್ಷಕ್ಕಾಗಿ ಇದ್ದೇನೆ ಹೊರತು ಬೇರೆ ವಿಚಾರಕ್ಕೆ ಅಲ್ಲ. ನನ್ನಂತಹ ಹಲವರು ಪಕ್ಷದಲ್ಲಿ ಇದ್ದಾರೆ. ಹೀಗಾಗಿ ಪಕ್ಷ ಯಾವ ಜವಾಬ್ದಾರಿ ನೀಡುತ್ತದೆಯೋ ಅದರಂತೆ ನಡೆಯುತ್ತೇನೆ. ನನಗೆ ಯಾರೂ ವಿರೋಧಿಗಳಿಲ್ಲ ‘ ಎಂದರು.
ಪಕ್ಷದಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಬಣದ ಜತೆ ಖರ್ಗೆ ಅವರ ಬಣ ಬರುತ್ತದೆಯೇ ಎಂದು ಕೇಳಿದಾಗ, ‘ ನಮ್ಮಲ್ಲಿ ಯಾವುದೇ ಬಣ ಇಲ್ಲ. ನಾವೆಲ್ಲರೂ ಸಮಾನರು. ಒಗ್ಗಟ್ಟಿದ್ದರೆ ನಮ್ಮ ಸರ್ಕಾರ ಬರುವುದು ಖಚಿತ ‘ ಎಂದು ತಿಳಿಸಿದರು.