ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಕರ್ನಾಟಕ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮತ್ತೊಬ್ಬ ಸಂಸದ ಶಶಿ ತರೂರು ವಿರುದ್ದ ನೇರ ಹಣಾಹಣಿ ಏರ್ಪಟ್ಟಿದೆ.
20 ವರ್ಷಗಳ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಗಾಂಧಿಯೇತರ ಅಧ್ಯಕ್ಷನನ್ನು ಹೊಂದಲು ಸಜ್ಜಾಗಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದ್ದು, ಅಕ್ಟೋಬರ್ 19ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಕರ್ನಾಟಕದವರೇ ಆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸೇರಿದಂತೆ ಗಾಂಧಿ ಕುಟುಂಬದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂಬ ನಿರ್ಧಾರದ ಬಳಿಕ ಚುನಾವಣೆ ಸ್ವರೂಪವೇ ಬದಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ಈ ಇಬ್ಬರು ನಾಯಕರ ನಡುವೆ ತೀವ್ರ ಪೈಪೋಟಿ ಕಂಡು ಬಂದಿದೆ. ಸರಿಸುಮಾರು 9000 ಕ್ಕೂ ಅಧಿಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳು ಮತ ಚಲಾವಣೆ ಮಾಡುವ ಅರ್ಹತೆ ಪಡೆದುಕೊಂಡಿದ್ದಾರೆ. ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರು ಅವರು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಮನ ಗೆಲ್ಲುವ ಕಸರತ್ತು ನಡೆಸಿದ್ದಾರೆ.
BIG NEWS : ಭಾರತದ ಗಡಿ ಪ್ರವೇಶಿಸಿದ ಮತ್ತೊಂದು ಪಾಕ್ ಡ್ರೋನ್ ಉಡೀಸ್: ಸೇನೆಯಿಂದ ಮುಂದುವರೆದ ಕಾರ್ಯಾಚರಣೆ
BIG NEWS : ʻಬಳ್ಳಾರಿ ಜೀನ್ಸ್ ಅನ್ನು ಜಾಗತಿಕ ಬ್ರಾಂಡ್ ಮಾಡುತ್ತೇನೆʼ: ರಾಹುಲ್ ಗಾಂಧಿ ಭರವಸೆ
BIGG NEWS : ದೇಶದ ರೈತರಿಗೆ ದೀಪಾವಳಿ ಗಿಫ್ಟ್ : ಇಂದು ಖಾತೆಗೆ ಹಣ ಜಮಾ, `ಒಂದು ದೇಶ-ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ