ನವದೆಹಲಿ: ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ(Mallikarjun Kharge)ಅವರು ನಿನ್ನೆ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದು, ಈ ಮೂಲಕ ಎಐಸಿಸಿ ಅಧ್ಯಕ್ಷ ಪಟ್ಟಕ್ಕೇರಿದ್ದಾರೆ.
ಈ ಬೆನ್ನಲ್ಲೇ ಖರ್ಗೆ ಯಾರೂ ಊಹಿಸಲಾಗದ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನೊಳಗೊಂಡ 47 ಸದಸ್ಯರ ಸ್ಟೀರಿಂಗ್ ಸಮಿತಿ ರಚಿಸಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಕೆಲಸವನ್ನು ಈ ಸಮಿತಿ ನೋಡಿಕೊಳ್ಳಲಿದೆ. ನಿನ್ನೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.
ಈ ಸಮಿತಿ ಪಕ್ಷದ ಸರ್ವೋಚ್ಚ ಸಭೆಯಲ್ಲಿ ಖರ್ಗೆ ಅವರ ಆಯ್ಕೆ ಅಂಗೀಕರಿಸಿದ ನಂತರ ಹೊಸ ಡಿಡಬ್ಲ್ಯುಸಿ ರಚನೆಯಾಗುವ ವರೆಗೆ ಕೆಲವು ಮಹತ್ವದ ನಿರ್ಧಾರ ಕೈಗೊಳ್ಳಲಿದೆ.ಈ ನೂತನ ಸಮಿತಿಯಲ್ಲಿ 23 ಸದಸ್ಯರು ಸೇರಿ ಒಟ್ಟು 47 ಸದಸ್ಯರಿಗೆ ಸ್ಥಾನ ನೀಡಲಾಗಿದೆ. ಇದೀಗ ಈ ಸಮಿತಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಿದೆ.
ಸಮಿತಿ ಸದಸ್ಯರಲ್ಲಿ ಪಕ್ಷದ ಹಿರಿಯ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ. ಎ ಎಲೆ ಆಂಟನಿ. ಅಂಬಿಕಾ ಸೋನಿ. ಕೆ,ಸಿ ವೇಣುಗೋಪಾಲ್, ರಣದೀಪ್ ಸುರ್ಜೆವಾಲಾ ಹಾಗೂ ದಿಗ್ವಿಜಯ್ ಸಿಂಗ್ ಇದ್ದಾರೆ. ಕರ್ನಾಟಕದ ಹೆಚ್ ಕೆ ಪಾಟೀಲ್, ಕೆ ಹೆಚ್ ಮುನಿಯಪ್ಪ ಹಾಗೂ ದಿನೇಶ್ ಗುಂಡೂರಾವ್ ಇದ್ದಾರೆ.
ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಶಶಿ ತರೂರ್ ಅವರು ಪಟ್ಟಿಯಿಂದ ನಾಪತ್ತೆಯಾಗಿದ್ದಾರೆ. ವರದಿಗಳ ಪ್ರಕಾರ, ಪಕ್ಷದ ಎಲ್ಲಾ CWC ಸದಸ್ಯರು ಮತ್ತು ಪದಾಧಿಕಾರಿಗಳು ತಮ್ಮ ಸ್ವಂತ ತಂಡವನ್ನು ಆಯ್ಕೆ ಮಾಡಲು ಹೊಸ ಪಕ್ಷದ ಮುಖ್ಯಸ್ಥರಿಗೆ ರಾಜೀನಾಮೆ ನೀಡಿದ್ದರು. “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಸಂವಿಧಾನದ XV (ಬಿ) ಪ್ರಕಾರ, ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಬದಲಿಗೆ ಕಾರ್ಯನಿರ್ವಹಣೆಯ ಸಮಿತಿಯನ್ನು ರಚಿಸಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಅ.26 ರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಸ ಮಾರಂಭದಲ್ಲಿ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ.24 ವರ್ಷಗಳ ನಂತ್ರ ಮೊದಲ ಬಾರಿಗೆ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಬಾರಿ ಗಾಂಧಿ ಕುಟುಂಬದವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ.
ಬೆಂಗಳೂರಿನಲ್ಲಿ ‘ಪಟಾಕಿ’ ದುರಂತ : ಹಲವರ ಬಾಳಿಗೆ ಕತ್ತಲಾದ ದೀಪಾವಳಿ ; 93 ಮಂದಿಗೆ ಗಾಯ
BREAKING NEWS : ಬೆಂಗಳೂರಿನಲ್ಲಿ ಇಂದು ‘HDK’ ಕನಸಿನ ಕೂಸು ‘ಪಂಚರತ್ನ’ ರಥ ಯಾತ್ರೆಗೆ ಚಾಲನೆ |Pancharatna Yathra