ನವದೆಹಲಿ : ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ, ಹಣದುಬ್ಬರ ಹೆಚ್ಚುತ್ತಿದೆ. ಶ್ರೀಮಂತರು, ಶ್ರೀಮಂತರಾಗುತ್ತಿದ್ದಾರೆ, ಬಡವರು ಬಡವರಾಗುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ದ ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಈ ಹಿನ್ನೆಲೆ ದೆಹಲಿಯಲ್ಲಿ ಭಾನುವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದಾರೆ.
ಬಾಲ್ಯದಿಂದ ಈತನಕ ನಾನು ಹೋರಾಟ ಮಾಡಿಕೊಂಡು ಬಂದಿದ್ದೇನೆ. ಈಗಲೂ ನಾನು ಹೋರಾಟ ಮಾಡುತ್ತೇನೆ. ಯಾವಾಗಲೂ ಹೃದಯ ದಿಂದ ಕೆಲಸ ಮಾಡಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ..
ಕರ್ನಾಟಕದಲ್ಲಿ ವಿಪಕ್ಷ ನಾಯಕ, ಬಹುತೇಕ ಎಲ್ಲಾ ಸಚಿವ ಸ್ಥಾನಗಳನ್ನು ಕೂಡ ಅಲಂಕರಿಸಿದ್ದೇನೆ. ಸಚಿವನಾಗಿ ಲೋಕಸಭೆಯಲ್ಲಿ ವಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದೇನೆ. ಇದು ಪಾರ್ಟ್ ಟೈಮ್ ಜಾಬ್ ಅಲ್ಲ ಫುಲ್ ಟೈಮ್ಸ್ ಜಾಬ್. ನಾನು ಯಾವಾಗಲೂ ಫುಲ್ ಟೈಮ್ ಕೆಲಸ ಮಾಡಿದ್ದೇನೆ ಎಂದಿದ್ದಾರೆ.
ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ, ನಿರುದ್ಯೋಗ ತಾಂಡವವಾಡುತ್ತಿದೆ,. ಹಣದುಬ್ಬರ ಹೆಚ್ಚುತ್ತಿದೆ. ಶ್ರೀಮಂತರು, ಶ್ರೀಮಂತರಾಗುತ್ತಿದ್ದಾರೆ, ಬಡವರು ಬಡವರಾಗುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ದ ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ.
ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಯಾರು ಚುನಾವಣೆ ಗೆ ಸ್ಪರ್ಧಿಸಲ್ಲ ಎಂದು ಹೇಳಿದರು. ಹಾಗಾಗಿ ನೀವು ಚುನಾವಣಾ ಗೆ ಸ್ಪರ್ಧೆ ಮಾಡಬೇಕು ಎಂದು ಹಲವರು ಹೇಳಿದ್ದಾರೆ. ಹಾಗಾಗಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ ಎಂದರು.
ಭ್ರಷ್ಟಾಚಾರ ನಡೆದಿದ್ರೆ ಕಾಂಗ್ರೆಸ್ ದಾಖಲೆ ಕೊಡಲಿ : ಸಿಎಂ ಬೊಮ್ಮಾಯಿ |Basavaraj Bommai
Gandhi Jayanti: ‘ನಕಲಿ ಗಾಂಧಿಗಳ ಬಗ್ಗೆ ನಾನೇಕೆ ಮಾತನಾಡಲಿ?’ – ಸಿಎಂ ಬೊಮ್ಮಾಯಿ