ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಶಶಿ ತರೂರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್ 26 ರ ಇಂದು ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಈ ಹಿನ್ನೆಲೆ ರಾಜ್ಯದಲ್ಲಿ ಎರಡು ಕಡೆ ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಹೌದು, ಬೆಂಗಳೂರು ಮತ್ತು ಕಲಬುರಗಿಯ ಎರಡು ಕಡೆ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ,
ಕಾಂಗ್ರೆಸ್ ಪಕ್ಷದ ವತಿಯಿಂದ ಬೆಂಗಳೂರಿನಲ್ಲಿ ಸಮಾವೇಶ ಹಾಗೂ ಕಲಬುರಗಿಯಲ್ಲಿ ಖರ್ಗೆ ಅಭಿಮಾನಿಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಖರ್ಗೆ ಪದಗ್ರಹಣ ಕಾರ್ಯಕ್ರಮದ ಬಳಿಕ ಶೀಘ್ರದಲ್ಲೇ ಅಭಿನಂದನಾ ಸಮಾವೇಶದ ದಿನಾಂಕ ನಿಗದಿಯಾಗಲಿದೆ ಎನ್ನಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್ 26 ರ ಇಂದು ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ 7987 ಮತಗಳನ್ನು ಪಡೆದು ಸ್ಪಷ್ಟ ಗೆಲುವು ಸಾಧಿಸಿದರೆ, ತರೂರ್ 1072 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಅಕ್ಟೋಬರ್ 17 ರಂದು ಭಾರತದಾದ್ಯಂತ 9,000 ಕ್ಕೂ ಹೆಚ್ಚು ಕಾಂಗ್ರೆಸ್ ಪ್ರತಿನಿಧಿಗಳು ತಮ್ಮ ಪಕ್ಷದ ಮುಖ್ಯಸ್ಥರನ್ನು ಆಯ್ಕೆ ಮಾಡಲು ಮತ ಚಲಾಯಿಸಿದರು.
ಪಕ್ಷದ ನೂತನ ಅಧ್ಯಕ್ಷರಾಗಿ ಖರ್ಗೆ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ದಿನವಾಗಿದ್ದು, ಸುಮಾರು 24 ವರ್ಷಗಳ ನಂತರ ಅವರು ಗಾಂಧಿಯೇತರ ಪಕ್ಷದ ಮೊದಲ ಅಧ್ಯಕ್ಷರಾಗಿದ್ದಾರೆ.
BIGG UPDATE : ಬೆಂಗಳೂರಿನಲ್ಲಿ ‘ಪಟಾಕಿ’ ಸಿಡಿದು 78 ಮಂದಿಗೆ ಗಾಯ ; ಐವರಿಗೆ ದೃಷ್ಟಿ ಮರಳುವ ಸಾಧ್ಯತೆ ಕಡಿಮೆ
BIGG NEWS : ಮಹಾರಾಷ್ಟ್ರದಲ್ಲಿ ಕೊರೊನಾ ಹೊಸ ತಳಿ ಪತ್ತೆ : ಕರ್ನಾಟಕದಲ್ಲಿ ‘ಹೈ ಅಲರ್ಟ್’
BIGG NEWS : ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್