ನವದೆಹಲಿ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ನಾಲ್ಕು 4 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದು, ಇಂದು ರಾಜಧಾನಿಗೆ ತೆರಳಿದ್ದಾರೆ. ಇದೇ ವೇಳೆ ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದು, ಹಿರಿಯ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ.
ಈ ವರ್ಷದ ನೀತಿ ಆಯೋಗದ ಸಭೆಯಲ್ಲಿ ಅವರು ಜಿಎಸ್ಟಿ ಬಾಕಿ ಪಾವತಿ ಮತ್ತು ಫೆಡರಲಿಸಂಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ.
ಎನ್ಐಟಿಐ (NITI)ಆಯೋಗ ಆಡಳಿತ ಮಂಡಳಿಯು 2015 ರಿಂದ ನಿಯಮಿತವಾಗಿ ಸಭೆ ಸೇರುತ್ತದೆ. ಈ ವರ್ಷ ಕೃಷಿ, ಆರೋಗ್ಯ ಮತ್ತು ಆರ್ಥಿಕತೆಗೆ ಸಂಬಂಧಿಸಿದ ವಿಷಯಗಳನ್ನು ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.
ಸಂಸತ್ತಿನ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರತಿಭಟನೆಯ ಕೇಂದ್ರಬಿಂದುವಾಗಿರುವ ಟಿಎಂಸಿ ಸಂಸದರನ್ನು ಭೇಟಿ ಮಾಡುವುದು ಅವರ ಕಾರ್ಯಸೂಚಿಯಲ್ಲಿನ ಮೊದಲ ವಿಷಯವಾಗಿದೆ.ಇದೇ ಸಮಯದಲ್ಲಿ ಮಮತಾ ಬ್ಯಾನರ್ಜಿಯವರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಯಲ್ಲಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ.
ಸಿಎಂ ಬ್ಯಾನರ್ಜಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಬಹುದು. ಇದೇ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಪಶ್ಚಿಮ ಬಂಗಾಳಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗತ್ತಿದೆ.