ಕೋಲ್ಕತ್ತ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಹೇಳನ ಮಾಡಿ ಪಶ್ಚಿಮ ಬಂಗಾಳ ಸಚಿವ ಅಖಿಲ್ ಗಿರಿ ಮಾತನಾಡಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.
Shocking news:: ಬೆಂಗಳೂರಿನಲ್ಲಿ ಪೋಷಕರು ಬೈದಿದಕ್ಕೆ 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!
ಅಖಿಲ್ ಗಿರಿ ಅವರು ರಾಷ್ಟ್ರಪತಿಗಳನ್ನು ಅವಹೇಳನ ಮಾಡಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬಿಜೆಪಿ ಪ್ರತಿಭಟನೆ ವ್ಯಕ್ತಪಡಿಸಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಸೇರಿದಂತೆ ಅಲ್ಲಿನ ತೃಣಮೂಲ ಕಾಂಗ್ರೆಸ್ (Trinamool Congress) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
Shocking news:: ಬೆಂಗಳೂರಿನಲ್ಲಿ ಪೋಷಕರು ಬೈದಿದಕ್ಕೆ 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!
ಮುರ್ಮು ಕುರಿತು ಗಿರಿ ಹೇಳಿದ್ದೇನು?
ಸಚಿವ ಗಿರಿ ಗುರುವಾರ ನಂದಿಗ್ರಾಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಆ ಸಂದರ್ಭದಲ್ಲಿ, ‘ಅವರು (ಸುವೇಂದು ಅಧಿಕಾರಿ) ನನ್ನನ್ನು ಚೆನ್ನಾಗಿ ಕಾಣುತ್ತಿಲ್ಲವೆಂದು ಟೀಕಿಸಿದ್ದಾರೆ. ಅವರೆಷ್ಟು ಚೆಂದ ಇದ್ದಾರೆ? ಜನ ಹೇಗೆ ಕಾಣಿಸುತ್ತಾರೆ ಎಂಬುದರ ಮೇಲೆ ಅವರ ವ್ಯಕ್ತಿತ್ವ ಅಳೆಯಬಾರದು. ನಾವು ರಾಷ್ಟ್ರಪತಿಗಳ ಹುದ್ದೆಯನ್ನು ಗೌರವಿಸುತ್ತೇವೆ. ಆದರೆ ಅವರು ಹೇಗೆ ಕಾಣುತ್ತಾರೆ?’ ಎಂದು ಗಹಗಹಿಸಿ ನಗುತ್ತಾ ಹೇಳುತ್ತಿರುವುದು ವಿಡಿಯೊದಲ್ಲಿದೆ. ಸಚಿವರು ಈ ಮಾತು ಹೇಳುತ್ತಿದ್ದಂತೆಯೇ ಅಲ್ಲಿ ಸೇರಿದ್ದವರೆಲ್ಲ ಹಾಸ್ಯ ಮಾಡಿ ನಗುತ್ತಿರುವ ದೃಶ್ಯ ವಿಡಿಯೊದಲ್ಲಿದೆ.
#WATCH | "We don't judge anyone by their appearance, we respect the office of the President (of India). But how does our President look?," says West Bengal Minister and TMC leader Akhil Giri in Nandigram (11.11.2022) pic.twitter.com/UcGKbGqc7p
— ANI (@ANI) November 12, 2022
ಬಿಜೆಪಿ ಪ್ರತಿಭಟನೆ
ಅಖಿಲ್ ಗಿರಿ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ಮಮತಾ ಬ್ಯಾನರ್ಜಿ ಅವರ ಸಂಪುಟದ ಸಚಿವ ರಾಷ್ಟ್ರಪತಿಯವರನ್ನು ಅವಮಾನಿಸಿದ್ದಾರೆ. ಮಮತಾ ಯಾವತ್ತೂ ಬುಡಕಟ್ಟು ವಿರೋಧಿ, ಮುರ್ಮು ಅವರನ್ನು ರಾಷ್ಟ್ರಪತಿ ಹುದ್ದೆಗೆ ಬೆಂಬಲಿಸಿರಲಿಲ್ಲ ಮತ್ತು ಈಗ ಈ ರೀತಿ ಅವಮಾನಿಸುತ್ತಿದ್ದಾರೆ. ಗಿರಿ ಅವರದು ನಾಚಿಕೆಗೇಡಿನ ಭಾಷಣ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಹೇಳಿದ್ದಾರೆ.
Shocking news:: ಬೆಂಗಳೂರಿನಲ್ಲಿ ಪೋಷಕರು ಬೈದಿದಕ್ಕೆ 7 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!
ಬಿಜೆಪಿಯ ಪಶ್ಚಿಮ ಬಂಗಾಳ ಘಟಕ ಸಹ ಹೇಳಿಕೆಯನ್ನು ಖಂಡಿಸಿದ್ದು, ಗಿರಿ ರಾಜೀನಾಮೆಗೆ ಆಗ್ರಹಿಸಿದೆ. ದ್ರೌಪದಿ ಮುರ್ಮು ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿ ಪಂಜಾ ಸಮ್ಮುಖದಲ್ಲೇ ಅಖಿಲ್ ಗಿರಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮಮತಾ ಮತ್ತು ಅವರ ಸಂಪುಟದವರೆಲ್ಲ ಬುಡಕಟ್ಟು ವಿರೋಧಿಗಳು ಎಂದು ಬಿಜೆಪಿ ಟ್ವೀಟ್ ಮಾಡಿದೆ.
President Droupadi Murmu, hails from the Tribal community. Akhil Giri, TMC Minister of Correctional Homes made objectionable comments about her in the presence of Shashi Panja, another minister from the women’s welfare department
Mamata Banerjee and TMC are anti-tribal. pic.twitter.com/vJNiZ7nBLM
— BJP Bengal (@BJP4Bengal) November 11, 2022
ಈ ಹಿಂದೆ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಕೂಡ ರಾಷ್ಟ್ರಪತಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ಬಳಿಕ ಕ್ಷಮೆ ಕೋರಿದ್ದರು. ಅವರು ರಾಷ್ಟ್ರಪತಿಗಳನ್ನು ರಾಷ್ಟ್ರಪತ್ನಿ ಎಂದು ಹೇಳಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದ್ದಲ್ಲದೆ, ರಾಜಕೀಯ ಕೋಲಾಹಲಕ್ಕೂ ಕಾರಣವಾಗಿತ್ತು.