Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ‘ಬಾಂಬ್ ಬೆದರಿಕೆ’ ಹಾಕಿದ್ದ ‘ಓರ್ವ ಆರೋಪಿ ಅರೆಸ್ಟ್’​​
KARNATAKA

BIG NEWS: ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ‘ಬಾಂಬ್ ಬೆದರಿಕೆ’ ಹಾಕಿದ್ದ ‘ಓರ್ವ ಆರೋಪಿ ಅರೆಸ್ಟ್’​​

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದ ಹಲವು ಕಾಲೇಜುಗಳಿಗೆ ಬಾಂಬ್ ಇರಿಸಲಾಗಿದೆ ಎಂಬುದಾಗಿ ಬೆದರಿಕೆಯ ಇ-ಮೇಲ್ ಕಳುಹಿಸಲಾಗಿತ್ತು. ಆ ಬಳಿಕ ಕಾಲೇಜುಗಳಲ್ಲಿ ಪರಿಶೀಲಿಸಲಾಗಿ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ಪೊಲೀಸರು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮುಖಾಂತರ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಓರ್ವ ವ್ಯಕ್ತಿಯ ಬಂಧಿಸಲಾಗಿದೆ.

ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ:04/10/2024 ರಂದು ವಿ.ವಿ.ಪುರಂ ಠಾಣಾ ಸರಹದ್ದಿನಲ್ಲಿರುವ ಬೆಂಗಳೂರು ಇನ್ಸ್‌ಟ್ಯೂಟ್ ಆಫ್ ಟೆಕ್ನಾಲಜಿ (ಬಿ.ಐ.ಟಿ) ಕಾಲೇಜಿನ ಪ್ರಾಂಶುಪಾಲರು ಹಾಜರಾಗಿ ಲಿಖಿತ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:04/10/2024 ರಂದು ಕಾಲೇಜಿನ ಆವರಣದಲ್ಲಿ ಹೈಡೋಜನ್‌ ಆಧಾರಿತ ಸುಧಾರಿತ ಐಇಡಿ ಗಳನ್ನು ಇಟ್ಟಿರುವುದಾಗಿ ಇ-ಮೇಲ್ ಐಡಿ s_ve sekr@hotmail.com ನಿಂದ ಬೆದರಿಕೆಯ ಇ ಮೇಲ್ ಸಂದೇಶವೊಂದು ಬಂದಿದ್ದು, ಈ ಕುರಿತು ಇ-ಮೇಲ್ ಕಳುಹಿಸಿರುವ ವ್ಯಕ್ತಿಯನ್ನು ಪತ್ತೆಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದಿದ್ದಾರೆ.

ಇದೇ ಪ್ರಕಾರ ದಿನಾಂಕ:04/10/2024 ರಂದು ಹನುಮಂತನಗರ ಪೊಲೀಸ್ ಠಾಣಾ ಸರಹದ್ದಿನ ಬಿ.ಎಂ.ಎಸ್ ಕಾಲೇಜಿನ ಪ್ರಾಂಶುಪಾಲರು ಸಹ ದೂರನ್ನು ಸಲ್ಲಿಸಿದ್ದು, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿರುತ್ತದೆ.

ಮೇಲೆ ತಿಳಿಸಿದ ಎರಡು ಪ್ರಕರಣಗಳ ತನಿಖೆಯನ್ನು ತಾಂತ್ರಿಕ ವಿಧಾನಗಳಿಂದ ಕೈಗೊಂಡು, ತನಿಖಾ ಕಾಲದಲ್ಲಿ ಈ ಪ್ರಕರಣದ ಓರ್ವ ವ್ಯಕ್ತಿಯನ್ನು ದಿನಾಂಕ:17/10/2024 ರಂದು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆ, ಸಾಲ್‌ರಿ ಟೌನ್‌ನಲ್ಲಿ ವಶಕ್ಕೆ ಪಡೆದುಕೊಂಡು, ಆತನನ್ನು ವಿಚಾರಣೆಗೊಳಪಡಿಸಿದಾಗ, ಈ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಆರೋಪಿಯು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಒಂದು ಹೆಚ್.ಪಿ ಕಂಪನಿಯ ಲ್ಯಾಪ್‌ಟಾಪ್ ಮತ್ತು ಒಂದು ನೋಕಿಯಾ ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಆರೋಪಿಯು 10 ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಸಿರುತ್ತಾನೆ. ಬೆಂಗಳೂರು ನಗರದ ವಿವಿಧ ಶಾಲಾ ಕಾಲೇಜುಗಳಲ್ಲಿ ಬಾಂಬ್‌ಗಳನ್ನು ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಕಳುಹಿಸಿರುವ ಸಂಬಂಧ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿಯೂ ಈ ಆರೋಪಿಯ ಪಾತ್ರದ ಬಗ್ಗೆ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.

ದಿನಾಂಕ:17/10/2024 ರಂದು ಆರೋಪಿಯನ್ನು ಪಶ್ಚಿಮ ಬಂಗಾಳದ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಟ್ರ್ಯಾನ್ಸಿಟ್ ವಾರೆಂಟ್‌ಗೆ ಕೋರಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿರುತ್ತೆ.

ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲೊಕೇಶ್ ಬರಮಪ್ಪ ಜಗಲಸ‌, ಐ.ಪಿ.ಎಸ್ ರವರ ಮತ್ತು ವಿ.ವಿ.ಪುರಂ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರಾದ ಶಾಮೀದ್ ಪಾಷ ರವರ ಮಾರ್ಗದರ್ಶನದಲ್ಲಿ ಎ.ಎ.ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಧರ್ಮೇಂದ್ರ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಯವರ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ ಎಂದು ಹೇಳಿದೆ.

BIG NEWS: ‘ಜೆಇಇ ಮೇನ್-2025 ಪರೀಕ್ಷಾ ಮಾದರಿ’ಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ‘ವಿಭಾಗ-ಬಿ’ಯಲ್ಲಿ ಐಚ್ಛಿಕ ಪ್ರಶ್ನೆಗಳಿರಲ್ಲ | JEE Main 2025 exam

ಬಾಲ್ಯ ವಿವಾಹ ತಡೆಗಟ್ಟುವ ಕಾನೂನನ್ನು ವೈಯಕ್ತಿಕ ಕಾನೂನುಗಳಿಂದ ತಡೆಯಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

2 Mins Read

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

2 Mins Read

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

2 Mins Read
Recent News

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ಸೋಮವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.…

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.