ರಾಯಚೂರು : ತನ್ನ ಊರಿಗೆ ಹೋಗಲು ಬಸ್ ಸಿಗಲಿಲ್ಲ ಎಂದು ಪುಂಡನೊಬ್ಬ ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದೀಗ ಬಂಧಿತ ಆರೋಪಿಯನ್ನು ಲಿಂಗಸುಗೂರಿನ ಗೋಲಪಲ್ಲಿಯ ತಿಮ್ಮಣ್ಣ ಎಂದು ಗುರುತಿಸಲಾಗಿದೆ. ಗ್ರಾಮದ ಬಳಿ ನ.19ರ ಬೆಳಗಿನ ಜಾವ 2ರ ವೇಳೆ ಆರೋಪಿ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ. ಕಲ್ಲು ತೂರಾಟದಲ್ಲಿ ಮೂರು ಸಾರಿಗೆ ಬಸ್, ಕಾರು ಹಾಗೂ ಲಾರಿಗಳ ಗಾಜುಗಳು ಒಡೆದು ಹೋಗಿದ್ದವು. ಅಲ್ಲದೇ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು.
ಘಟನೆಯಿಂದಾಗಿ ಮೂರು ಸಾರಿಗೆ ಬಸ್, ಕಾರು ಹಾಗೂ ಲಾರಿಗಳ ಗಾಜುಗಳು ಒಡೆದು ಹೋಗಿದ್ದವು. ಅಲ್ಲದೇ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಆರೋಪಿಗಳು ಕುಡಿದ ಅಮಲಿನಲ್ಲಿ ಕಲ್ಲುತೂರಾಟ ನಡೆಸಿರುವುದು ತನಿಖೆಯಲ್ಲಿ ತಿಳಿದು ಬಂದಿತ್ತು. ಮಾತ್ರವಲ್ಲದೇ ಕಳ್ಳನ ಮಾಡಲು ಈ ಕೃತ್ಯ ನಡೆಸಲಾಗಿದೆ ಎಂದು ಶಂಕಿಸಲಾಗಿತ್ತು.
ಬಂಧಿತ ಆರೋಪಿ ತನ್ನ ಅಕ್ಕ, ಬಾವನನ್ನ ಬೆಂಗಳೂರಿಗೆ ಕಳುಹಿಸಲು ಬಸ್ ಸಿಗದೆ ಬೇಸರಗೊಂಡಿದ್ದ. ಬಳಿಕ ತನ್ನ ಮೂರು ಜನ ಸ್ನೇಹಿತರೊಂದಿಗೆ ಮದ್ಯಪಾನ ಮಾಡಿ ಬೆಳಗಿನ ಜಾವ ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲು ತೂರಿ ಜಖಂಗೊಳಿಸಿದ್ದರು. ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಉಳಿದ ಆರೋಪಿಗಳಾದ ಅಂಬರೀಶ್ ಹಾಗೂ ಆಂಜನೇಯ ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.