ಬೆಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ. ಕೇರಳ ಮೂಲದ ಮಸೂಕ್ ಬಂಧಿತ ಆರೋಪಿ. ಬಂಧಿತನಿಂದ ಸುಮಾರು 22 kg 810 ಗ್ರಾಂ ತೂಕದ 10 ಲಕ್ಷ ಬೆಲೆಬಾಳುವ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
BIGG NEWS: ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ;ಗೋವಾದಲ್ಲಿ ಬಿಜೆಪಿ ಮುಖಂಡರ ಮೋಜು-ಮಸ್ತಿ
ಕಲಾಸಿಪಾಳ್ಯ ಬಳಿಯ ಜಲಠಂಟೇಶ್ವರ ದೇವಸ್ಥಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಆಗಾ ಗಾಂಜಾ ಮಾರಾಟ ಮಾಡುತ್ತಿರುವುದು ಬಯಲಿಗೆ ಬಂದಿದೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.