ಬೀದರ್: ಜಿಲ್ಲೆಯಲ್ಲಿ ನ್ಯಾಯಾಧೀಶರೊಬ್ಬರ ಮನೆಗೆ ಕನ್ನ ಹಾಕಿ 8 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಂತ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಏಪ್ರಿಲ್.3ರಂದು ಬೀದರ್ ನಗರದ ಜನವಾಡ ರಸ್ತೆಯಲ್ಲಿನ 2ನೇ ಜೆಎಂಎಫ್ ಸಿ ನ್ಯಾಯಾಧೀಶರಾದಂತ ಎಂ.ಡಿ ಶೇಜ್ ಚೌಟಾಯಿ ಅವರಿದ್ದಂತ ವಸತಿ ಗೃಹದಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿದ್ದಂತ ಬೀದರ್ ನ ನ್ಯೂ ಟೌನ್ ಠಾಣೆಯ ಪೊಲೀಸರು ತನಿಖೆಗೆ ಇಳಿದಿದ್ದರು.
ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದಂತ ಪೊಲೀಸರು, ಸಿಸಿಟಿವಿಯಲ್ಲಿ ದಾಖಲಾಗಿದ್ದಂತ ದೃಶ್ಯಾವಳಿ ಆಧರಿಸಿ ಬಂಧನಕ್ಕೆ ಬಲೆ ಬೀಸಿದ್ದರು. ಮಹಾರಾಷ್ಟ್ರದಿಂದ ರೈಲಿನಲ್ಲಿ ಬೀದರ್ ಗೆ ಬಂದು ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ ಮಾಡಿದ್ದಂತ ಆರೋಪಿಯನ್ನು ಕೊನೆಗೂ ಬಂಧಿಸಿದ್ದಾರೆ.
ಬೀದರ್ ನ್ಯೂ ಠಾಣೆಯ ಪೊಲೀಸರು ಮಹಾರಾಷ್ಟ್ರದ ಲಾತೂರು ರೈಲ್ವೆ ನಿಲ್ದಾಣದಲ್ಲಿ ಕಳ್ಳತನ ಮಾಡಿದ್ದ ತಂದೆ, ಮಗ ಸೇರಿದಂತೆ ಮೂವರು ಖದೀಮರನ್ನು ಬಂಧಿಸಿದ್ದಾರೆ.
ಹಿರಿಯ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ ನಿಧನಕ್ಕೆ ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ ಸಂತಾಪ
ಇದು ಜಾತಿಗಣತಿಯೋ.? ದ್ವೇಷಗಣತಿಯೋ..?: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ