ನವದೆಹಲಿ: ಮುಂಬೈನಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ ವ್ಯಕ್ತಿಯನ್ನು ಉತ್ತರ ಪ್ರದೇಶದ ನೋಯ್ಡಾದಲ್ಲಿ ಶನಿವಾರ ಬಂಧಿಸಲಾಗಿದೆ.
ಮೂಲತಃ ಬಿಹಾರ ಮೂಲದ ಅಶ್ವಿನ್ ಕುಮಾರ್ ಸುಪ್ರಾ (50) ಎಂಬಾತನನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಬೆದರಿಕೆ ಹಾಕಲು ಬಳಸಿದ ಅವರ ಫೋನ್ ಮತ್ತು ಸಿಮ್ ಕಾರ್ಡ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆಗಾಗಿ ಆತನನ್ನು ನೋಯ್ಡಾದಿಂದ ಮುಂಬೈಗೆ ಕರೆತರಲಾಗುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ತನಿಖೆಗಾಗಿ ಆತನನ್ನು ನೋಯ್ಡಾದಿಂದ ಮುಂಬೈಗೆ ಕರೆತರಲಾಗುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಮುಂಬೈ ನಗರದಲ್ಲಿ 34 ‘ಮಾನವ ಬಾಂಬ್’ಗಳನ್ನು ಇರಿಸಲಾಗಿದೆ ಎಂಬ ಬೆದರಿಕೆ ಕರೆ ಬಂದ ನಂತರ ಮುಂಬೈ ಪೊಲೀಸರು ಶುಕ್ರವಾರ ಮೆಟ್ರೋಪಾಲಿಟನ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಗಮನಾರ್ಹವಾಗಿ ಹೆಚ್ಚಿಸಿದ್ದಾರೆ.