ಕೊಪ್ಪಳ : ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.

ಗಂಗಾವತಿಯ ಶ್ರೀರಾಮನಗರದ ಸನ್​ ಶೈನ್ ಬಾರ್​ನಲ್ಲಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಮದ್ಯ ಸೇವನೆಯ ವೇಳೆ ಶ್ರೀರಾಮ ನಗರದ ಕುಮಾರ್ ರಾಠೋಡ್ ಎಂಬಾತ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಈ ವೇಳೆ ಮುಸ್ಲಿಂ ಯವಕರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಸದ್ಯ ಗಾಯಾಳು ಕುಮಾರ್ ರಾಠೋಡ್​ರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

Share.
Exit mobile version