ಶಿವಮೊಗ್ಗ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಹೀಗಿದ್ದರೂ ಮೈಕ್ರೋ ಫೈನಾನ್ಸ್ ಕಿರುಕುಳ ಮಾತ್ರ ತಪ್ಪಿಲ್ಲ. ಈ ಕಾರಣಕ್ಕಾಗಿಯೇ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಬ್ದುಲ್ ಸತ್ತಾರ್ ಎಂಬುವರು ಕಳೆದ ಒಂದೂವರೆ ವರ್ಷಗಳ ಹಿಂದೆ ಎಕ್ಟೀಕಾಸ್ ಸ್ಮಾಲ್ ಫೈನಾನ್ಸ್ ನಿಂದ 5 ಲಕ್ಷ ಸಾಲ ಪಡೆದಿದ್ದರು. ಈ ಹಿಂದಿನ ಕಂತುಗಳನ್ನು ಕಟ್ಟಿದ್ದಂತ ಅವರು, ಕಳೆದ ಮಾರ್ಚ್ ತಿಂಗಳ ಕಂತಿನ ಹಣ ರೂ.11,400 ಕಟ್ಟೋದಕ್ಕೆ ಸಾಧ್ಯವಾಗಿರಲಿಲ್ಲ.
ಫೈನಾನ್ಸ್ ಕಂಪನಿಯಿಂದ ದಿನಂಪ್ರತಿ ಸಾಲದ ಕಂತಿನ ಹಣ ಕಟ್ಟುವಂತೆ ಕಿರುಕುಳ ನೀಡುತ್ತಿದ್ದರು. ಇದೇ ಕಿರುಕುಳಕ್ಕೆ ಬೇಸತ್ತೆ ಇಂದು ಅಬ್ದಲ್ ಸುತ್ತಾರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೂಡಲೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತದ H-1B, ಗ್ರೀನ್ ಕಾರ್ಡ್ ಹೊಂದಿರುವವರು ದಿನದ 24 ಗಂಟೆಯೂ ಗುರುತಿನ ಚೀಟಿ ಹೊಂದಿರಬೇಕು: ಅಮೇರಿಕಾದ ಹೊಸ ನಿಯಮ