ಶಿವಮೊಗ್ಗ: ಪ್ರಿಯತಮೆ ಕೈಕೊಟ್ಟಿದ್ದ ಕಾರಣಕ್ಕೆ ವಿಷ ಸೇವಿಸಿ ಪ್ರಿಯಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದನು. ಕಳೆದ ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಿಯಕರ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ಶಿವಮೊಗ್ಗ ತಾಲ್ಲೂಕಿನ ಕಲ್ಲಾಪುರ ಗ್ರಾಮದ ಸಂಜಯ್(21) ಎಂಬಾತ ಹುಡುಗಿ ಕೈಕೊಟ್ಟಿದ್ದಕ್ಕೆ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಸಾವು ಬದುಕಿನ ನಡುವೆ ಹೋರಾಟುತ್ತಿದ್ದಂತ ಸಂಜಯ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸಂಜಯ್(21) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಹೀಗಾಗಿ ಮೆಗ್ಗಾನ್ ಆಸ್ಪತ್ರೆಯ ಬಳಿಯಲ್ಲಿ ಸಂಜಯ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈನಲ್ಲಿ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಸಾವು
BIG NEWS : ದೇಶಾದ್ಯಂತ `ತಾಪಮಾನ’ ಹೆಚ್ಚಳ : ಹೃದಯ, ಶ್ವಾಸಕೋಶ, ಮೆದುಳಿಗೆ ಹಾನಿಕಾರಕ.!