ದಕ್ಷಿಣ ಕನ್ನಡ: ಜಿಲ್ಲೆಯ ನ್ಯಾಯಾಲಯದ ನ್ಯಾಯಧೀಶರ ಮುಂದೆಯೇ ವಿಷ ಕುಡಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಕೋರ್ಟ್ ನಲ್ಲಿ ಈ ಘಟನೆ ನಡೆದಿದೆ. ವಿಷ ಕುಡಿದು ಕಾವು ಮಣಿಯಡ್ಕ ನಿವಾಸಿ ರವಿ(35) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾರೆ.
ರವಿ ಹಾಗೂ ಪತ್ನಿ ವಿದ್ಯಾಶ್ರೀ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು. 2 ದಿನಗಳ ಹಿಂದೆ ವಿದ್ಯಾಶ್ರೀ ಕತ್ತು ಹಿಸುಕಿ ಕೊಲೆಗೆ ಆರೋಪಿ ರವಿ ಯತ್ನಿಸಿದ್ದಾಗಿ ಆರೋಪಿಸಲಾಗಿತ್ತು. ಹೀಗಾಗಿ ಗಂಡ-ಹೆಂಡತಿ ಜಗಳವು ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.
ಈ ಸಂಬಂಧ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆ ಬಳಿಕ ಇಬ್ಬರ ನಡುವೆ ವಿಚ್ಚೇದನದ ಮಾತುಕತೆ ನಡೆದಿತ್ತು. ಮಹಿಳಾ ಠಾಣೆಗೆ ಹಾಜರಾಗಲು ರವಿಗೆ ಪೊಲೀಸರು ಸೂಚಿಸಿದ್ದರು. ಈ ನಡುವೆ ರವಿ ಪುತ್ತೂರು ಕೋರ್ಟ್ ಆವರಣಕ್ಕೆ ಬಂದು ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದರು.
ಪುತ್ತೂರು ನ್ಯಾಯಾಲಯದ ನ್ಯಾಯಾಧೀಶರ ಮುಂದೆ ವಿಷವನ್ನು ರವಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷ ಸೇವನೆ ಬಳಿಕ ನ್ಯಾಯಾಲಯದಲ್ಲೇ ವಾಂತಿಯನ್ನು ರವಿ ಮಾಡಿಕೊಂಡಿದ್ದರು. ಅವರನ್ನು ಪೊಲೀಸರು ತಕ್ಷಣವೇ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆಗೆ ದಾಖಲಿಸಿದ್ದರು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.








