ಹಾವೇರಿ: ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ ಮುಂದುವರೆದಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ವಿಕಾಸ್ ಎಂಬುವರು ತನ್ನ ಸ್ನೇಹಿತ ಶ್ರೇಯಸ್ ಎಂಬುವರಿಗೆ 1.50 ಲಕ್ಷವನ್ನು ಮೈಕ್ರೋ ಫೈನಾನ್ಸ್ ಕಂಪನಿಯೊಂದರಿಂದ ಕೊಡಿಸಿದ್ದರು. ಈ ಹಣಕ್ಕೆ ಅಸಲು, ಬಡ್ಡಿ ಸೇರಿಸಿ 2.50 ಲಕ್ಷ ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿತ್ತು.
ವಿಕಾಸ್ ಸ್ನೇಹಿತ ಶ್ರೇಯಸ್ ಮೈಕ್ರೋ ಫೈನಾನ್ಸ್ ಅಸಲು, ಬಡ್ಡಿ ಕಟ್ಟದ ಕಾರಣ, ಅದಕ್ಕೆ ಜಾಮೀನಾಗಿದ್ದಕ್ಕೆ ನೀನೇ ಕಟ್ಟುವಂತೆ ಕಿರುಕುಳ ನೀಡಲಾಗುತ್ತಿತ್ತು. ಈ ಕಿರುಕುಳಕ್ಕೆ ಬೇಸತ್ತು ಕ್ರಿಮಿನಾಶಕ ಸೇವಿಸಿದಂತ ವಿಕಾಸ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ವಿಕಾಸ್ ನನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಕಾಸ್ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿರುವುದಾಗಿ ತಿಳಿದು ಬಂದಿದೆ.
ಓಲಾ ಎಲೆಕ್ಟ್ರಿಕ್ ಕಂಪನಿಗೆ ದಂಡ ವಿಧಿಸಿ ಮತ್ತು ಪರಿಹಾರ ನೀಡಲು ಗ್ರಾಹಕರ ಆಯೋಗ ಆದೇಶ
Good News: ರಾಜ್ಯ ಸರ್ಕಾರದಿಂದ ಸಮೀಕ್ಷೆಯಲ್ಲಿ ಭಾಗಿಯಾಗಿದ್ದ ಗಣತಿದಾರರು, ಮೇಲ್ವಿಚಾರಕರಿಗೆ ಗೌರವಧನ ಬಿಡುಗಡೆ